Bengaluru Crime: ಲಂಚ ಪಡೆಯುತ್ತಿದ್ದ ವೇಳೆ ಅಂಬೇಡ್ಕರ್‌ ನಿಗಮ ಅಧಿಕಾರಿ ಲೋಕಾ ಬಲೆಗೆ

Published : Jan 07, 2023, 12:11 PM IST
Bengaluru Crime: ಲಂಚ ಪಡೆಯುತ್ತಿದ್ದ ವೇಳೆ ಅಂಬೇಡ್ಕರ್‌ ನಿಗಮ ಅಧಿಕಾರಿ ಲೋಕಾ ಬಲೆಗೆ

ಸಾರಾಂಶ

ಪ್ರೇರಣಾ ಯೋಜನೆಯಡಿ ಸ್ವ ಸಹಾಯ ಗುಂಪುಗಳಿಗೆ ಸಾಲದ ಕಡತಗಳನ್ನು ವಿಲೇವಾರಿ ಮಾಡಲು ಲಂಚ ಸ್ವೀಕರಿಸುತ್ತಿದ್ದ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ತಾಲೂಕು ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು (ಜ.7) : ಪ್ರೇರಣಾ ಯೋಜನೆಯಡಿ ಸ್ವ ಸಹಾಯ ಗುಂಪುಗಳಿಗೆ ಸಾಲದ ಕಡತಗಳನ್ನು ವಿಲೇವಾರಿ ಮಾಡಲು ಲಂಚ ಸ್ವೀಕರಿಸುತ್ತಿದ್ದ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ತಾಲೂಕು ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ರಾಜಾಜಿ ನಗರದಲ್ಲಿನ ಅಂಬೇಡ್ಕರ್‌ ಅಭಿವೃದ್ಧಿ ನಿಗಮ(Ambedkar Development Corporation)ದಲ್ಲಿ ತಾಲೂಕು ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಾರಾಯಣಪ್ಪ ಬಂಧಿತ ಅಧಿಕಾರಿ. ಸಾಲ ಮಂಜೂರಾತಿಯ ಕಡತಗಳನ್ನು ವಿಲೇವಾರಿ ಮಾಡಲು ಮೂರು ಸಾವಿರ ರು. ಲಂಚ ಸ್ವೀಕರಿಸುತ್ತಿದ್ದ ವೇಳೆ ಆರೋಪಿಯು ಸಿಕ್ಕಿಬಿದ್ದಿದ್ದಾನೆ ಎಂದು ಲೋಕಾಯುಕ್ತ ಪೊಲೀಸರು ಹೇಳಿದ್ದಾರೆ. ಲಂಚ ಪಡೆಯುತ್ತಿರುವ ಬಗ್ಗೆ ಸಾಕಷ್ಟುದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರ ತಂಡವು ಸಾಮಾಜಿಕ ಕಾರ್ಯಕರ್ತರ ಸೋಗಿನಲ್ಲಿ ಹೋಗಿ ಸಾಲ ಮಂಜೂರಾತಿಗೆ ಕೋರಿದ್ದಾರೆ. ಸಾಲ ಮಂಜೂರಾತಿ ಕಡತಗಳನ್ನು ವಿಲೇವಾರಿ ಮಾಡಲು .3 ಸಾವಿರ ಲಂಚ ಬೇಡಿಕೆ ಇಟ್ಟಿದ್ದ.

ವಾಣಿಜ್ಯ ತೆರಿಗೆ ವಂಚಕರಿಗೆ ಲೋಕಾ ಭರ್ಜರಿ ಶಾಕ್‌: ಕರ್ನಾಟಕದ 37 ಕಡೆ ಏಕಕಾಲಕ್ಕೆ ದಾಳಿ

ಬೈಕ್‌ ಕಳ್ಳತನ: ಆರೋಪಿ ಸೆರೆ

 ಬೆಂಗಳೂರು : ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ರಾತ್ರಿ ವೇಳೆ ಹ್ಯಾಂಡಲ್‌ ಲಾಕ್‌ ಮುರಿದು(Handle lock broken) ಕಳವು ಮಾಡುತ್ತಿದ್ದ ಖತರ್ನಾಕ್‌ ಕಳ್ಳ(Thief)ನನ್ನು ಕೆಂಗೇರಿ ಠಾಣೆ ಪೊಲೀಸರು(Kengeri police) ಬಂಧಿಸಿದ್ದಾರೆ. ಹೊಸ ಗುಡ್ಡದಹಳ್ಳಿ(Hosaguddadahalli) ಯ ಮಂಜುನಾಥ ನಗರ(Manjunath nagar)ದ ಸೈಯದ್‌ ಅಲ್ತಾಫ್‌(Syed Altaf)(45) ಬಂಧಿತ. ಆರೋಪಿಯಿಂದ .1 ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಕೆಂಗೇರಿ ಫಾರೆಸ್ಟ್‌ ಲೇಔಟ್‌(Kengeri forest layout) ನಿವಾಸಿ ನವೀನ್‌ ಕುಮಾರ್‌(Naveen kumar) ಅವರು ಡಿ.8ರಂದು ರಾತ್ರಿ ಎಂದಿನಂತೆ ಮನೆ ಎದುರು ತಮ್ಮ ದ್ವಿಚಕ್ರ ವಾಹನ ನಿಲುಗಡೆ ಮಾಡಿದ್ದರು. ಮಾರನೇ ದಿನ ಬೆಳಗ್ಗೆ ಎದ್ದು ನೋಡಿದಾಗ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ಮೋಜು-ಮಸ್ತಿಗೆ ಸುಲಭವಾಗಿ ಹಣ ಗಳಿಸಲು ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ. ಕದ್ದ ದ್ವಿಚಕ್ರ ವಾಹನಗಳನ್ನು ಪರಿಚಿತರ ಮೂಲಕ ಮಾರಾಟ ಮಾಡಿಸಿ ಹಣ ಪಡೆದು ವ್ಯಯಿಸುತ್ತಿದ್ದ.

ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ ಮಾಡುತ್ತಿದ್ದವನ ಬಂಧನ

ಬೆಂಗಳೂರು ಬಿಎಂಟಿಸಿ ಬಸ್‌((BBMP bus) ಗಳಲ್ಲಿ ಪ್ರಯಾಣಿಕರ ಮೊಬೈಲ್‌ ಫೋನ್‌(Mobile phones) ಕಳವು ಮಾಡುತ್ತಿದ್ದ ಕಳ್ಳನನ್ನು ಗೋವಿಂದರಾಜ ನಗರ(Govindarajanagar) ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲಂಚ ಕೊಡದಿರುವುದು ಪಡೆಯದಿರುವುದು ಸಮಾಜಕ್ಕೆ ನೀಡುವ ಕೊಡುಗೆ: ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ

ದೊಡ್ಡ ಆಲದಮರ ವಿನಾಯಕ ನಗರ ನಿವಾಸಿ ಅವುಲ ಕಾವಡಿ ವಿಜಯ್‌(27) ಬಂಧಿತ. ಆರೋಪಿಯಿಂದ .3 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 49 ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ. ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ಮೂಲದ ಆರೋಪಿಯು ಕಳೆದ ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದಾನೆ. ದುಶ್ಚಟಗಳ ದಾಸನಾಗಿದ್ದು, ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಮೊಬೈಲ್‌ ಕಳ್ಳತನಕ್ಕೆ ಇಳಿದಿದ್ದ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!