ಹಣ ಸುಲಿಗೆ ಪ್ರಕರಣ, ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ!

By Gowthami KFirst Published Jul 11, 2024, 12:26 PM IST
Highlights

'ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು' ಎಂದು ಹೇಳಿ ವೈರಲ್‌ ಆಗಿಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ.

ಬೆಂಗಳೂರು (ಜು.11):'ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು' ಎಂದು ಹೇಳಿ ವೈರಲ್‌ ಆಗಿಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.

ದಿವ್ಯ ವಸಂತ  ಮತ್ತು ಗ್ಯಾಂಗ್ ನಿಂದ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಯತ್ನ ಪ್ರಕರಣ ಇದಾಗಿದ್ದು, ಈ ಕೇಸ್‌ ನಲ್ಲಿ ತಮ್ಮನ ಬಂಧನ ನಂತರ ಪರಾರಿಯಾಗಿ ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

Latest Videos

ಮಂಗಳೂರಿನಲ್ಲಿ ಕಾಣೆಯಾಗಿದ್ದ ಹಿಂದೂ ಯುವತಿ ಮುಸ್ಲಿಂ ಜೊತೆ ಪತ್ತೆ, ಯುವಕನ ಹಿನ್ನೆಲೆ ಕೇಳಿ ಶಾಕ್!

ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯ ತಮಿಳುನಾಡಿನಿಂದ ಕೇರಳದಲ್ಲಿ ತಲೆ ಮರೆಸಿಕೊಂಡಿದ್ದಳು. ಸದ್ಯ ಕೇರಳದಿಂದ ಬಂಧಿಸಿ ಕರೆತಂದಿರುವ  ಜೀವನ್ ಭೀಮಾನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

 ಇಂದಿರಾನಗರ 'ಸ್ಪಾ' ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ  ರಾಜ್ ನ್ಯೂಸ್‌ ಕಾರ್ಯನಿರ್ವಾಹಕ ರಾಜಾನುಕುಂಟೆ ವೆಂಕಟೇಶ್, ದಿವ್ಯ ತಮ್ಮ ಸಂದೇಶ್ ಸೇರಿ ಮೂವರನ್ನು ಈಗಾಗಲೇ ಬಂಧಿಸಿದ್ದಾರೆ.

ಸುಲಿಗೆ ಕೃತ್ಯಗಳಿಗೆ ವಾಟ್ಸ್ ಆಪ್‌ನಲ್ಲಿ 'ಸೈ ರಿಸರ್ಚ್ ಟೀಂ' ಹೆಸರಿನ ಗ್ರೂಪ್ ಅನ್ನು ವೆಂಕಟೇಶ್‌ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈ ಗ್ರೂಪ್‌ನಲ್ಲಿ ತಮ್ಮ ಕಾರ್ಯಸೂಚಿಗಳ ಬಗ್ಗೆ ಆರೋಪಿಗಳು ಚರ್ಚಿಸುತ್ತಿದ್ದರು. ಈ ಪ್ರಕರಣ ಹೊರ ಬರುತ್ತಿದ್ದಂತೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂತು. ಇಂದಿರಾ ನಗರದ 80 ಅಡಿ ರಸ್ತೆಯ ಮೈಕಲ್ ಪಾಳ್ಯ ಸಮೀಪದ ಸಹರಾ ಇಂಟರ್ ನ್ಯಾಷನಲ್ ಸ್ಪಾದ ವ್ಯವಸ್ಥಾಪಕ ಮಹೇಶ್ ಶೆಟ್ಟಿಗೆ ಬೆದರಿಸಿ 1 ಲಕ್ಷ ರು ಸುಲಿಗೆ ಮಾಡಿದ್ದು, ಈ ಬಗ್ಗೆ ವ್ಯವಸ್ಥಾಪಕ ನೀಡಿದ ದೂರಿನ ಮೇರೆಗೆ ರಾಜ್ ನ್ಯೂಸ್‌ ಸಿಇಒ ವೆಂಕಟೇಶ್ ಹಾಗೂ ಇತರರ ವಿರುದ್ಧ ಇಂದಿರಾನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.  ಈ ಎರಡೂ ಪ್ರಕರಣಗಳು ಇಂದಿರಾಗರದಲ್ಲಿ ನಡೆದಿದೆ.

ಟೆಲಿಕಾಂಗಳ ದರ ಹೆಚ್ಚಳ ವಿರೋಧಿಸಿ ನೆಟ್ಟಿಗರ ಅಭಿಯಾನ, ಲಕ್ಷಕ್ಕೂ ಅಧಿಕ ಮಂದಿ BSNLಗೆ ಸಿಮ್ ಪೋರ್ಟ್!

ರಾಜ್ ನ್ಯೂಸ್‌ ಎಂಡಿ ಸ್ಪಷ್ಟನೆ: ಬ್ಲ್ಯಾಕ್‌ಮೇಲ್ ಮಾಡಿ ಹಲವು ಕಡೆ ಹಣ ಸುಲಿಗೆ ಮಾಡಿರುವ ಆರೋಪದ ಮೇಲೆ ಬಂಧಿತರಾಗಿರುವ ಆರೋಪಿಗಳಿಗೂ ರಾಜ್‌ ನ್ಯೂಸ್‌ಗೂ ಯಾವುದೇ ಸಂಬಂಧವಿಲ್ಲವೆಂದು ಆ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ರಾಜ್‌ ನ್ಯೂಸ್‌ನಲ್ಲಿ ನಾವು ಯಾವುದೇ ಸಿಇಓ ಹುದ್ದೆಯನ್ನು ಸೃಷ್ಟಿಸಿಲ್ಲ. ರಾಜಾನುಕುಂಟೆ ವೆಂಕಟೇಶ್ ಎಂಬುವವರು 3 ತಿಂಗಳಿಂದ ನಮ್ಮ ಸಂಸ್ಥೆಯಲ್ಲಿ ಮಾರ್ಕೆಟಿಂಗ್‌ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ಸಂಸ್ಥೆಯ ಸಿಇಓ ಹಾಗೂ ಉದ್ಯೋಗಿಯಲ್ಲ. ಸಿಇಓ ಎಂದು ವೆಂಕಟೇಶ್ ಹೇಳಿಕೊಂಡಿರುವುದಕ್ಕೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ರಾಜ್ ನ್ಯೂಸ್ ಎಂಡಿ ಹೇಳಿದ್ದಾರೆ. ಇನ್ನುಳಿದ ಆರೋಪಿಗಳು ನಮ್ಮ ಸಂಸ್ಥೆಯ ಉದ್ಯೋಗಿಗಳಲ್ಲ. ಆರೋಪಿಗಳು ರಾಜ್‌ ನ್ಯೂಸ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವುದರಿಂದ ಕಾನೂನು ಕ್ರಮಕ್ಕೆ ಮುಂದಾಗಿದ್ದೇವೆ. ರಾಜ್ ನ್ಯೂಸ್‌ ಹೆಸರನ್ನು ಈ ಆರೋಪಿಗಳ ಜತೆ ಸೇರಿಸಬಾರದು ಎಂ

 

click me!