Love Breakup: ಯುವತಿ ಮುಂದೆ ಹೊಟ್ಟೆಗೆ ಚಾಕು ಚುಚ್ಚಿಕೊಂಡ ಯುವಕ: ಆಮೇಲೆನಾಯ್ತು?

Published : Jun 20, 2026, 08:55 PM IST
Anekal Love Failure

ಸಾರಾಂಶ

Love Breakup: ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ತನ್ನ ಪ್ರೇಯಸಿ ಎದುರೇ ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡು ಆತ್ಮ*ಹ*ತ್ಯೆಗೆ ಯತ್ನಿಸಿದ ಘಟನೆ ಆನೇಕಲ್ ವ್ಯಾಪ್ತಿಯಲ್ಲಿ ನಡೆದಿದೆ.

ಆನೇಕಲ್ (ಜೂ.20): ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ತನ್ನ ಪ್ರೇಯಸಿ ಎದುರೇ ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡು ಆತ್ಮ*ಹ*ತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗಾಯಗೊಂಡ ಯುವಕನನ್ನು ಚಿದಂಬರ ಮಲ್ಲಪ್ಪ ಮರಮ್ಮಣ್ಣನವರ ಎಂದು ಗುರುತಿಸಲಾಗಿದೆ. ಆತ ಕಳೆದ ಕೆಲವು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಯುವತಿ ಸಂಬಂಧವನ್ನು ಮುರಿದುಕೊಂಡಿದ್ದಳು.

ಈ ಹಿನ್ನೆಲೆ ಯುವತಿಯನ್ನು ಮನವೊಲಿಸಲು ಚಿದಂಬರ ಹಲವು ಬಾರಿ ಪ್ರಯತ್ನಿಸಿದ್ದಾನೆ ಎನ್ನಲಾಗಿದ್ದು, ಇಂದು ಯುವತಿ ವಾಸವಿದ್ದ ಪಿಜಿ (PG) ಬಳಿ ತೆರಳಿದ್ದ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.

ಪ್ರಕರಣ ದಾಖಲು

ಜಗಳದ ಮಧ್ಯೆ ಭಾವೋದ್ವೇಗಕ್ಕೆ ಒಳಗಾದ ಚಿದಂಬರ ತನ್ನ ಬಳಿಯಿದ್ದ ಚಾಕುವಿನಿಂದ ಹೊಟ್ಟೆಗೆ ತಾನೇ ಇರಿದುಕೊಂಡು ಆತ್ಮ*ಹ*ತ್ಯೆಗೆ ಯತ್ನಿಸಿದ್ದಾನೆ. ಘಟನೆಯನ್ನು ಕಂಡ ಸ್ಥಳೀಯರು ತಕ್ಷಣವೇ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಏಡ್ಸ್ ರೋಗಿ ಎಂದು ಸುಳ್ಳು ಹೇಳಿ ಹಣ ಸುಲಿಗೆ: ಚಾಲಾಕಿ ಪತ್ನಿ ವಿರುದ್ಧ ಕೇಸ್‌
Gauribidanur: ಹಾಡಹಗಲೇ ಮನೆಗೆ ನುಗ್ಗಿ ವೃದ್ಧೆ ಹ*ತ್ಯೆ: ಕಿವಿ ಸಮೇತ ಓಲೆ ಕಿತ್ತು ಪರಾರಿ