* ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ.
* ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯ ಗ್ರಾಮದಲ್ಲಿ ಘಟನೆ.
* ಅಂಗನವಾಡಿ ಕೇಂದ್ರಕ್ಕೆ ಮುಂಬಡ್ತಿ ನೀಡಿ ಮತ್ತೆ ಹಿಂಬಡ್ತಿ ಆದೇಶ ನೀಡಿದ ಹಿನ್ನೆಲೆ ಆತ್ಮಹತ್ಯೆ ಗೆ ಯತ್ನ
ತುಮಕೂರು, (ಫೆ.21): ಮೈಸೂರು ಜಿಲ್ಲೆ ದೊಡ್ಡ ಮಾರಗೌಡನಹಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ(Anganwadi Worker) ಆತ್ಮಹತ್ಯೆಗೆ ಯತ್ನಿಸಿದ(Attempts Suicide) ಘಟನೆ ಮಾಸುವ ಮುನ್ನವೇ ಮತ್ತೋರ್ವ ಅಂಗನವಾಡಿ ಕಾರ್ಯಕರ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಹೌದು...ಅಂಗನವಾಡಿ ಕಾರ್ಯಕರ್ತೆಯೊಬ್ಬರು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು (Tumakuru)ಜಿಲ್ಲೆಯಲ್ಲಿ ನಡೆದಿದೆ.
undefined
Crime News ಮದ್ವೆಯಾಗಿ 10 ತಿಂಗಳಿಗೆ ಜೀವನ ಸಾಕಾಯ್ತೆ? ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯದ ಗೀತಾ(29) ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ. ಇವರಿಗೆ ನಾಗೇಗೌಡನಪಾಳ್ಯ ಗ್ರಾಮದ ಮಿನಿ ಅಂಗನವಾಡಿ ಕೇಂದ್ರದಿಂದ ಕಟ್ಟಿಗೆಹಳ್ಳಿ ಅಂಗನವಾಡಿ ಕೇಂದ್ರಕ್ಕೆ ಎರಡು ತಿಂಗಳ ಹಿಂದೆ ಮುಂಬಡ್ತಿ ಸಿಕ್ಕಿತ್ತು. ಕಟ್ಟಿಗೆಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಗೀತಾ ಕೆಲಸ ನಿರ್ವಹಿಸುತ್ತಿದ್ದರು. ಬಳಿಕ ಏಕಾಏಕಿ ಅಧಿಕಾರಿಗಳು ಹಿಂಬಡ್ತಿ ನೀಡಿದ್ದಾರೆ.
ಹಿಂಬಡ್ತಿ ನೀಡಿದ್ದಕ್ಕೆ ಮನನೊಂದ ಗೀತಾ ಆತ್ಮಹತ್ಯೆ ಯತ್ನಕ್ಕೂ 2 ದಿನ ಮೊದಲಿಂದ ಊಟ ಬಿಟ್ಟಿದ್ದರು. ಭಾನುವಾರ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಯಹತ್ಯೆಗೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಕುಟುಂಬಸ್ಥರು ಗೀತಾರ ಕುತ್ತಿಗೆಯಲ್ಲಿದ್ದ ಸೀರೆಯನ್ನು ಕತ್ತರಿಸಿ ಕೂಡಲೇ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಅಧಿಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿದು ದಲಿತ ಮಹಿಳೆಯಾದ ನನಗೆ ಈ ರೀತಿಯ ಅನ್ಯಾಯವೆಸಗಿದ್ದಾರೆ ಎಂದು ಗೀತಾ ಮತ್ತು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್, ಸಿಡಿಪಿಒ ಅನುಷಾ, ಸೂಪರ್ವೈಸರ್ ಗಂಗಭೈರಮ್ಮ ಅವರ ವಿರುದ್ಧ ಆರೋಪ ಮಾಡಿದ್ದಾರೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ
ಶ್ರೀಮಂಗಲ ವನ್ಯಜೀವಿ ವಿಭಾಗದ ವ್ಯಾಪ್ತಿಯ ಬಿರುನಾಣಿಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಮೊಗ್ಗದ ಯುವರಾಜ್ ಕಳೆದ 10 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದು, ಬಿರುನಾಣಿಯ ಸಿ.ಸತ್ಯ ಎಂಬವರ ಮನೆಯಲ್ಲಿ ವಾಸವಾಗಿದ್ದರು.
ಭಾನುವಾರ ಸಂಜೆ ಕರ್ತವ್ಯ ಮುಗಿಸಿ ಯುವರಾಜ್ ಮನೆಗೆ ಬಂದಾಗ ಪತ್ನಿ ಶಿಲ್ಪಾ ವೇಲ್'ನಿಂದ ಬಾತ್ ರೂಮ್'ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದ್ದು, ಇದನ್ನು ನೋಡಿ ಮನೆ ಮಾಲಕ ಸತ್ಯ ಅವರನ್ನು ಕರೆದು ಮೃತದೇಹವನ್ನು ಇಬ್ಬರೂ ಸೇರಿ ಇಳಿಸಿದ್ದಾರೆ.
ಈ ವಿಷಯವನ್ನು ಸಂಬಂಧಿಕರಿಗೆ ದೂರವಾಣಿ ಮೂಲಕ ತಿಳಿಸಿದ್ದ ಯುವರಾಜ್, ಸ್ವಲ್ಪ ಸಮಯದಲ್ಲೇ ಬಾತ್ ರೂಮ್'ಗೆ ಹೋಗಿ ಪತ್ನಿ ನೇಣು ಬಿಗಿದು ಕೊಂಡಿದ್ದ ವೇಲ್'ನಿಂದ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇನ್ನು ಸ್ಥಳಕ್ಕೆ ಕೊಡಗು ವನ್ಯಜೀವಿ ಎ. ಸಿ.ಎಫ್.ದಯಾನಂದ್, ಶ್ರೀಮಂಗಲ ಆರ್.ಎಫ್.ಓ.ವೀರೇಂದ್ರ ಮರಿಬಸಣ್ಣವರ್ ಭೇಟಿ ನೀಡಿದ್ದಾರೆ.
ವಿದ್ಯಾರ್ಥಿ ಆತ್ಮಹತ್ಯೆ
ಬಳ್ಳಾರಿ: ಪೋಷಕರು ಮೊಬೈಲ್ ಕೊಡಿಸದ ಕಾರಣ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಟ್ಟೂರು ತಾಲ್ಲೂಕಿನ ತೂಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರಾಜ್ (17) ಆತ್ಮಹತ್ಯೆಗೆ ಶರಣಾದವರು. ವಿದ್ಯಾರ್ಥಿ ಪ್ರಥಮ ಪಿಯುಸಿ ಓದುತ್ತಿದ್ದ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.