ಮೈಸೂರಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ, ಆರೋಪಿ ಅರೆಸ್ಟ್

By Suvarna News  |  First Published Sep 3, 2021, 10:29 PM IST

* ಮೈಸೂರಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ
* ಮೈಸೂರಿನ ಸ್ಟಡಿಹೌಸ್​ ಬಳಿ ಘಟನೆ
* ಘಟನೆ ನಡೆದ ಎರಡು ಗಂಟೆಯೊಳಗೆ ಆರೋಪಿ ಅರೆಸ್ಟ್


ಮೈಸೂರು, (ಸೆ.03):  ಹಾಡುಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಮೈಸೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

 ಮೈಸೂರು ರಿಂಗ್​ ರೋಡ್​​ ಬಳಿ ಇಂದು (ಸೆ.03) ಪೊಲೀಸರು, ಆರೋಪಿಯನ್ನು ಅರೆಸ್ಟ್‌​ ಮಾಡಿದ್ದಾರೆ. ಘಟನೆ ನಡೆದ ಎರಡು ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Latest Videos

undefined

ಗ್ಯಾಂಗ್ ರೇಪ್ ಘಟನೆ ಮಾಸುವ ಮುನ್ನವೇ ಮೈಸೂರಿನಲ್ಲಿ ಮತ್ತೊಂದು ಹೀನ ಕೃತ್ಯ

 ಮೈಸೂರಿನ ಆರ್.ಎಸ್.ನಾಯ್ಡು ನಗರದ ಹೋಲಿ ಕ್ರಾಸ್ ಸ್ಡಡಿ ಹೌಸ್​​ನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಶುಕ್ರವಾರ ಸಂಜೆ ಹಲ್ಲೆ ಮತ್ತು ಅತ್ಯಾಚಾರ ಯತ್ನ ನಡೆದಿದೆ. ಘಟನೆಯಲ್ಲಿ ಗಾಯೊಂಡಿರುವ ಯುವತಿ ನಗರದ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. 

 ಸ್ಟಡಿಹೌಸ್​ನಲ್ಲಿ ಆಂಧ್ರ ಮೂಲದ 7 ವಿದ್ಯಾರ್ಥಿನಿಯರಿದ್ದರು. ಘಟನೆ ವೇಳೆ ಉಳಿದ ವಿದ್ಯಾರ್ಥಿನಿಯರು ತರಗತಿಗೆ ತೆರಳಿದ್ದರು. ಇದನ್ನು ಗಮನಿಸಿಯೇ ಸ್ಟಡಿಹೌಸ್ ಒಳಗೆ ನುಗ್ಗಿದ್ದ ಆರೋಪಿ, ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹಲ್ಲೆಗೈದು ಪರಾರಿಯಾಗಿದ್ದ.

ಈ ರೇಪ್ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಯ ವಿಚಾರಣೆ ನಡೆಸಿದ್ದಾರೆ.

click me!