ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಸಾವಿನ ಸರಣಿ ಮುಂದುವರಿದಿದ್ದು, ಇಂದು ವೈದ್ಯಕೀಯ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


ಬೆಂಗಳೂರು (ಜೂ.10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಸಾವಿನ ಸರಣಿ ಮುಂದುವರಿದಿದ್ದು, ಇಂದು ವೈದ್ಯಕೀಯ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರಾಜಸ್ತಾನದ ಮೂಲದವರೆಂದು ತಿಳಿದುಬಂದಿದೆ. ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಅಟಲ್ ಬಿಹಾರಿ ಮೆಡಿಕಲ್ ಕಾಲೇಜ(Atal Bihari Medical College)ಲ್ಲಿ  ಮೊದಲನೇ ವರ್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ. ಇಂದು ಬೆಳಗ್ಗೆ ಪ್ರಾಕ್ಟಿಕಲ್ ಎಕ್ಸಾಂ ಅಟೆಂಡ್ ಮಾಡಿದ್ದ ವಿದ್ಯಾರ್ಥಿ. ಬಳಿಕ ಮಧ್ಯಾಹ್ನ ಹಾಸ್ಟೆಲ್‌ಗೆ ಬಂದು ಕೊಠಡಿಯ ರೂಂ ಲಾಕ್ ಮಾಡಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನೆ ಬಳಿಕ ಸ್ಥಳಕ್ಕೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಆತ್ಮಹತ್ಯೆ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

Latest Videos

ಇಂಗ್ಲೀಷ್‌ ಓದೋದು ಕಷ್ಟ ಅನ್ನೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್‌ ವಿದ್ಯಾರ್ಥಿನಿ!

click me!