ವಿಜಯಪುರ: ಬೈರಗೊಂಡ ಫೈರಿಂಗ್‌ ಕೇಸ್‌, ಮತ್ತೆ ಮೂವರ ಬಂಧನ

Kannadaprabha News   | Asianet News
Published : Nov 13, 2020, 03:15 PM IST
ವಿಜಯಪುರ: ಬೈರಗೊಂಡ ಫೈರಿಂಗ್‌ ಕೇಸ್‌, ಮತ್ತೆ ಮೂವರ ಬಂಧನ

ಸಾರಾಂಶ

ಬೈರಗೊಂಡ ಮೇಲೆ ಗುಂಡಿನ ದಾಳಿ ಪ್ರಕರಣ|  ಮತ್ತೆ ಮೂವರ ಬಂಧನ| ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 19 ಆರೋಪಿಗಳ ಸೆರೆ| ಬಂಧಿತರಿಂದ ಕೃತ್ಯಕ್ಕೆ ಬಳಸಿದ ಒಂದು ಮೋಟಾರ್‌ ಸೈಕಲ್‌, ಎರಡು ಮೊಬೈಲ್‌ ಹಾಗೂ ಒಂದು ಏರಗನ್‌ ಜಪ್ತಿ|  

ವಿಜಯಪುರ(ನ.13): ನಗರದ ಹೊರ ವಲಯದ ಕನ್ನಾಳ ಕ್ರಾಸ್‌ ಬಳಿ ಮಹಾದೇವ ಬೈರಗೊಂಡ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. 

ಇಂಡಿ ತಾಲೂಕಿನ ದೇಗಿನಾಳ ಗ್ರಾಮದ ಸಂಘರ್ಷ ಸಂಜಯ ಸೂರ್ಯವಂಶಿ (23), ಉಮರಾಣಿ ಗ್ರಾಮದ ಸಂಗಪ್ಪ ಗುರುಬಸು ಯಮದೆ (23) ಹಾಗೂ ವಿಜಯಪುರದ ಜಲನಗರ ಬಡಾವಣೆಯ ಚೇತನ ಚೆನ್ನಪ್ಪ ಶಿರಶ್ಯಾಡ (30) ಬಂಧಿತ ಆರೋಪಿಗಳಾಗಿದ್ದಾರೆ. 

ವಿಜಯಪುರ: ಬೈರಗೊಂಡ ಶೂಟೌಟ್‌, ಮತ್ತೆ ಐವರ ಬಂಧನ

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಆರೋಪಿಗಳನ್ನು ಬಂಧಿಸಲಾಗಿದೆ. ಗುರುವಾರ ಮತ್ತೆ 3 ಆರೋಪಿಗಳನ್ನು ಬಂಧಿಸಲಾಗಿದೆ. ಇದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 19 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಒಂದು ಮೋಟಾರ್‌ ಸೈಕಲ್‌, ಎರಡು ಮೊಬೈಲ್‌ ಹಾಗೂ ಒಂದು ಏರಗನ್‌ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ