Mangaluru Youth Murder: ಯುವಕನಿಗೆ ದುಷ್ಕರ್ಮಿಗಳ ತಂಡ ಚಾಕು ಇರಿದು ಕೊಂದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ
ಮಂಗಳೂರು (ಜು. 28): ಯುವಕನಿಗೆ ದುಷ್ಕರ್ಮಿಗಳ ತಂಡ ಚಾಕು ಇರಿದು ಕೊಂದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ. ಸುರತ್ಕಲ್ ಮಂಗಲಪೇಟೆಯಲ್ಲಿ ಫಾಝಿಲ್‌ಗೆ ದುಷ್ಕರ್ಮಿಗಳ ಚಾಕು ಇರಿದು ಕೊಂದಿದ್ದಾರೆ. ಈ ಬೆನ್ನಲ್ಲೇ ಮಂಗಳೂರಿನ ಬಜ್ಪೆ, ಪಣಂಬೂರು, ಮುಲ್ಕಿ, ಸುರತ್ಕಲ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಆದೇಶ ಹೊರಡಡಿಸಿದ್ದಾರೆ. "ಫಾಜಿಲ್ ಕೊಲೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ, ತನಿಖೆ ಬಳಿಕವೇ ಫಾಜಿಲ್ ಹತ್ಯೆಗೆ ಕಾರಣ ತಿಳಿದು ಬರಲಿದೆ" ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ಚಾಕು ಇರಿತದಿಂದ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಯುವಕ ಸಾವನ್ನಪ್ಪಿದ್ದಾನೆ. ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಈಗ ದೇಶಾದ್ಯಂತ ಭಾರೀ ಸದ್ದು ಮಾಡಿದೆ. ಈ ನಡುವೆ ಮತ್ತೋರ್ವ ಯುವಕನ ಕೊಲೆ ಕರಾವಳಿ ಜಿಲ್ಲೆಯನ್ನು ಬೆಚ್ಚಿಬಿಳಿಸಿದೆ. ಫಾಜಿಲ್ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ. ಫ್ರೆಂಡ್ ಜತೆ ಮಾತನಾಡಿ ಹೊರಬಂದ ಫಾಜಿಲ್ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ಅಟ್ಯಾಕ್ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಫಾಜಿಲ್ ಭೀಕರ ಕೊಲೆ ಮಾಡಲಾಗಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಅಂಗಡಿಗೆ ನುಗ್ಗಿ ಫಾಜಿಲ್ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆಸಲಾಗಿದ್ದು ಸುರತ್ಕಲ್ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೂರು ಜನರ ಗುಂಪು ಯುವಕನ್ನು ಅಟ್ಟಾಡಿಸಿ ಕೊಂದಿದ್ದಾರೆ. ಸಂಜೆ ಸುಮಾರು 6 ಗಂಟೆಗೆ ಈ ಘಟನೆ ನಡೆದಿದೆ. ಸ್ನೇಹಿತನ ಜತೆ ಮಾತನಾಡುತ್ತಿದ್ದ ವೇಳೆ ಫಾಜಿಲ್ ಮೇಲೆ ಹಲ್ಲೆ ಮಾಡಲಾಗಿದೆ. ಪ್ರವೀಣ್ ಹತ್ಯೆ ಬೆನ್ನಲ್ಲೇ ಮತ್ತೊಂದು ನಡೆದ ಮತ್ತೊಂದು ಹತ್ಯೆಗೆ ಮಂಗಳೂರು ಬೆಚ್ಚಿಬಿದ್ದಿದೆ. ಇನ್ನೂ ಈ ಘಟನೆ ಬೆನ್ನಲ್ಲೇ ಪೊಲೀಸರು ಸುರತ್ಕಲ್‌ನಲ್ಲಿ ಅಂಗಡಿ, ಮುಂಗಟ್ಟು ಮುಚ್ಚಿಸಿದ್ದಾರೆ. ಮಂಗಳೂರು ನಗರದಾದ್ಯಂತ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.