
ಮಂಡ್ಯ (ಜ. 18) ಮಂಡ್ಯದಲ್ಲಿ ಎಸಿಬಿ ಬಲೆಗೆ ಮಹಿಳಾ ಅಧಿಕಾರಿ ಬಿದ್ದಿದ್ದಾರೆ. ಕಚೇರಿಯಲ್ಲೇ 25 ಸಾವಿರ ರೂ ಲಂಚ ಸ್ವೀಕಾರ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಅಧೀಕ್ಷಕಿ ವಿಜಯ ಎಸಿಬಿ ಬಲೆಗೆ ಬಿದ್ದ ಮಹಿಳಾ ಅಧಿಕಾರಿ. ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು, ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕರು ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿ ಅಧೀಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ಮಾಜಿ ಶಾಸಕ ಅನಿಲ್ ಲಾಡ್ ಕಾರು ಅಪಘಾತ.. ಪತ್ನಿ ಚಲಾಯಿಸುತ್ತಿದ್ದರು
ಹೊರ ಗುತ್ತಿಗೆ ಆಧಾರದಲ್ಲಿ 4ನೇ ದರ್ಜೆ ಹುದ್ದೆಗೆ ಆರ್ಡರ್ ಕಾಪಿ ನೀಡಲು 25ಸಾವಿರ ರೂ ಬೇಡಿಕೆ ಇಟ್ಟಿದ್ದ ಅಧಿಕಾರಿ ಸೆರೆಯಾಗಿದ್ದಾರೆ. ಮಹದೇವಯ್ಯ ಎಂಬುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಎಸಿಬಿಗೆ ದೂರು ಮಹದೇವಯ್ಯ ದೂರು ನೀಡಿದ್ದರು.
ಭ್ರಷ್ಟಾಚಾರ ನಿಗ್ರಹ ದಳ ಠಾಣೆ ಪ್ರಭಾರ ಪೊಲೀಸ್ ಉಪ ಅಧೀಕ್ಷಕ ಪರಶುರಾಮಪ್ಪ, ಪೊಲೀಸ್ ನಿರೀಕ್ಷಕ ಸತೀಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಬಂಧಿತ ಅಧಿಕಾರಿ ವಿಜಯ ಅವರಿಂದ 25ಸಾವಿರ ಲಂಚದ ಹಣ ವಶಕ್ಕೆ ಪಡೆಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ