
ಕಲಬುರಗಿ (ಏ.19): ಮಹಿಳೆಯರ ಮೇಲೆ ಅತ್ಯಾಚಾರ, ಪೊಲೀಸರ ಮೇಲೆಯೇ ಹಲ್ಲೆ, ಕೊಲೆ, ದರೋಡೆ ಸೇರಿದಂತೆ ಇತ್ತೀಚೆಗೆ ಕಲಬುರಗಿಯಲ್ಲಿ ಅಪರಾಧ ಕೃತ್ಯಗಳು ಹೆಚ್ಚಳವಾಗುತ್ತಿರುವುದು ಸಾರ್ವಜನಿಕರು ಆತಂಕಪಡುವಂತಾಗಿದೆ.
ಕಳೆದ ವಾರವಷ್ಟೇ ಜಿಲ್ಲೆಯ ಹೊರವಲಯದಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರನ್ನ ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪೊಲೀಸರ ಮೇಲೆಯೇ ಕಲ್ಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯೂ ನಡೆದಿತ್ತು. ಇದೀಗ ಮಹಿಳೆಯೋರ್ವಳು ಬಾತ್ ರೂಮ್‌ನಲ್ಲಿದ್ದ ವೇಳೆ ಅಪಾರ್ಟ್‌ಮೆಂಟ್ ಸೆಕ್ಯೂರಿಟಿ ಗಾರ್ಡ್ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡಿದ ಘಟನೆ ಕಲಬುರಗಿ ಪಟ್ಟಣದಲ್ಲಿ ನಡೆದಿದೆ.
ಕ್ರೈಂ ಸಿಟಿ ಆಗ್ತಿದೆಯಾ ಕಲಬುರಗಿ? ಹಾಡಹಗಲೇ ಇಬ್ಬರ ಮಹಿಳೆಯ ಬರ್ಬರ ಹತ್ಯೆ!
ನಗರದ ರಾಮಮಂದಿರ ವೃತ್ತದ ಬಳಿಯಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಾಡಿಗೆ ಇರುವ ಕುಟುಂಬ. ಅದೇ ಅಪಾರ್ಟ್‌ಮೆಂಟ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಆರೋಪಿ ವಿಶ್ವನಾಥ್. ಮಹಿಳೆ ಬಾತ್ ರೂಮ್‌ಗೆ ಹೋಗಿದ್ದನ್ನ ಗಮನಿಸಿದ್ದ ಆರೋಪಿ, ವಿಡಿಯೋ ಚಿತ್ರೀಕರಣ ಮಾಡಲು ಯತ್ನಿಸಿದ್ದಾನೆ. ಇದನ್ನ ಗಮನಿಸಿದ ಮಹಿಳೆ ಶಾಕ್‌ಗೆ ಒಳಗಾಗಿದ್ದಾಳೆ. ಕೂಡಲೇ ಗಂಡನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ. ಬಳಿಕ ಮನೆಗೆ ಮಹಿಳೆಯ ಪತಿ ಸೆಕ್ಯೂರಿಟಿ ಗಾರ್ಡ್‌ನನ್ನು ಹಿಡಿದು ಅಪಾರ್ಟ್‌ಮೆಂಟ್ ಅಂಡರ್‌ಗ್ರೌಂಡ್‌ನಲ್ಲಿರುವ ಕಂಬಕ್ಕೆ ಕಟ್ಟಿಹಾಕಿದ್ದಾನೆ ಈ ವೇಳೆಗೆ ಸ್ಥಳೀಯರು ಕೂಡ ಸ್ಥಳದಲ್ಲಿ ಜಮಾಯಿಸಿದ್ದಾರೆ. ವಿಶ್ವನಾಥ್‌ಗೆ ಥಳಿಸಿ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು. ಪ್ರಕರಣ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ