
ಮೀರತ್ (ಜೂ. 10): ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ವರದಕ್ಷಿಣೆಗಾಗಿ ಸೇನಾ ಮೇಜರ್ ತನ್ನ ಪತ್ನಿಯ ಬೆರಳನ್ನು ಕತ್ತರಿಸಿದ ಆರೋಪ ಕೇಳಿಬಂದಿದೆ. ಆರೋಪಿ ಮೇಜರ್‌ರನ್ನು ಮೀರತ್‌ನ 510 ಆರ್ಮಿ ಬೇಸ್‌ನಲ್ಲಿ ಕಾರ್ಪ್ಸ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್‌ನಲ್ಲಿ ನಿಯೋಜಿಸಲಾಗಿದೆ. ದಂಪತಿಗೆ ಐದು ವರ್ಷದ ಮಗನಿದ್ದಾನೆ. ಸೇನಾ ಮೇಜರ್ 30ವರ್ಷದ ಪತ್ನಿ ಬೆರಳಿಗಾದ ಗಾಯದೊಂದಿಗೆ ಪೊಲೀಸರನ್ನು ಸಂಪರ್ಕಿಸಿದ್ದು ಪತಿ 2014 ರಲ್ಲಿ ಮದುವೆಯಾದಾಗಿನಿಂದ ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಆರೋಪಿಗಳ ವಿರುದ್ಧ ಕೌಟುಂಬಿಕ ದೌರ್ಜನ್ಯ ಮತ್ತು ವರದಕ್ಷಿಣೆ ಕಿರುಕುಳದ ಆರೋಪಗಳನ್ನು ದಾಖಲಿಸಲು ಆದೇಶ ಹೊರಡಿಸಲಾಗಿದೆ ಎಂದು ಮೀರತ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಚಂದ್ರಕಾಂತ್ ಮೀನಾ ತಿಳಿಸಿದ್ದಾರೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
ಮೀರತ್‌ನ ಸದರ್ ಬಜಾರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಡಿಎಸ್ ರಾವತ್ ಅವರು ಸೇನಾ ಅಧಿಕಾರಿಯ ಪತ್ನಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ, ಆರೋಪಿಯ ವಿರುದ್ಧ ದಾಖಲಾಗಿರುವ ಐಪಿಸಿ ಸೆಕ್ಷನ್‌ಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.
ಕಳೆದ ಎಂಟು ವರ್ಷಗಳಿಂದ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗಿದ್ದೇನೆ ಎಂದು ಸೇನಾ ಮುಖ್ಯಸ್ಥನ ಪತ್ನಿ ಆರೋಪಿಸಿದ್ದಾರೆ. “ನನ್ನ ಪೋಷಕರು ಅವನ ಎಲ್ಲಾ ವರದಕ್ಷಿಣೆ ಬೇಡಿಕೆಗಳನ್ನು ಪೂರೈಸಿದರೂ, ಅವನು ನನ್ನನ್ನು ನಿಂದಿಸುತ್ತಿದ್ದನು. ಈ ವೇಳೆ ಅವರು ಕೋಪೋದ್ರಿಕ್ತರಾಗಿ ನನ್ನ ಬೆರಳನ್ನು ಕತ್ತರಿಸಿದ್ದಾರೆ" ಎಂದು ದೂರುದಾರರು ಆರೋಪಿಸಿದ್ದಾರೆ.
ರಾಜಿ ಮಾಡಿಕೊಳ್ಳಲು ಮನವೊಲಿಕೆ?: ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಯಾಗಿರುವ ಮಹಿಳೆಯ ತಂದೆ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಭಾರತದ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ಪ್ರಕರಣ ದಾಖಲಿಸದಂತೆ ಪೊಲೀಸರು ಆರಂಭದಲ್ಲಿ ಸಲಹೆ ನೀಡಿದ್ದರು ಎಂದು ಭಾರತೀಯ ನೌಕಾಪಡೆಯ ನಿವೃತ್ತ ಸಿಬ್ಬಂದಿ ಆರೋಪಿಸಿದ್ದಾರೆ. "ಎಫ್‌ಐಆರ್ ದಾಖಲಿಸುವ ಬದಲು, ಆರೋಪಿಗಳೊಂದಿಗೆ ರಾಜಿ ಮಾಡಿಕೊಳ್ಳಲು ಪೊಲೀಸರು ನಮ್ಮನ್ನು ಮನವೊಲಿಸಿದರು" ಎಂದು ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಹೇಳಿದ್ದಾರೆ.
ಈ ನಡುವೆ ಸಂತ್ರಸ್ತ ಮಹಿಳೆ ಆಸ್ಪತ್ರೆಯಲ್ಲಿನ ಜನರೊಂದಿಗೆ ತನಗಾದ ಕಷ್ಟವನ್ನು ಹಂಚಿಕೊಳ್ಳುವ ವೀಡಿಯೊ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾಗಿದೆ ಮತ್ತು ಈ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ವಿಧವಾ ವೇತನ ಕೊಡಿಸುವ ನೆಪದಲ್ಲಿ 75 ವರ್ಷದ ಮಹಿಳೆ ಮೇಲೆ ಅತ್ಯಾಚಾರ
ಇದನ್ನೂ ಓದಿ: ವರದಕ್ಷಿಣೆ ದಾಹ: ವರ್ಷದ ಹಿಂದೆ ಮದ್ವೆಯಾಗಿದ್ದ 20 ರ ಗೃಹಿಣಿಯ ಸಜೀವ ದಹನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ