
ಬೆಂಗಳೂರು(ಜೂ.02): ರಾಜಧಾನಿಯಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ನಗರ ಪೊಲೀಸರು ಶಾಲಾ-ಕಾಲೇಜುಗಳಿಂದ ನೂರು ಮೀಟರ್ ವ್ಯಾಪ್ತಿಯಲ್ಲಿರುವ ಅಂಗಡಿಗಳ ಮೇಲೆ ದಾಳಿ ಮುಂದುವರೆಸಿದ್ದಾರೆ. ದಾಳಿ ವೇಳೆ ಅಂಗಡಿಗಳಲ್ಲಿ ಅಕ್ರಮವಾಗಿ ಮಾದಕವಸ್ತುಗಳು ಹಾಗೂ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿ ಪ್ರಕರಣ ದಾಖಲಿಸುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ಪಶ್ಚಿಮ ವಿಭಾಗದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಳಿ ನಡೆಸಿರುವ ಪೊಲೀಸರು ಒಟ್ಟು 164 ಪ್ರಕರಣ ದಾಖಲಿಸಿದ್ದಾರೆ. ಈ ಪೈಕಿ ಮಾದಕವಸ್ತು ಸೇವನೆ ಆರೋಪದಡಿ ಐಪಿಸಿ ಸೆಕ್ಷನ್ 27 ಬಿ ಅಡಿ 154 ಪ್ರಕರಣ ದಾಖಲಿಸಿ, 154 ಜನರನ್ನು ಬಂಧಿಸಲಾಗಿದೆ. ಮಾದಕವಸ್ತು ಮಾರಾಟ ಆರೋಪದಡಿ 10 ಜನರನ್ನು ಬಂಧಿಸಿ 11 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ 10 ಪ್ರಕರಣ ದಾಖಲಿಸಲಾಗಿದೆ.
ಕೇಂದ್ರ ವಿಭಾಗದ ಪೊಲೀಸ್ ಠಾಣೆಗಳ ವ್ಯಾಪ್ತಿಯ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿರುವ ಅಂಗಡಿಗಳ ಮೇಲೆ ದಾಳಿ ಮಾಡಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ 21 ಪ್ರಕರಣ ದಾಖಲಿಸಲಾಗಿದೆ. 18 ಮಂದಿ ಮಾದಕವಸ್ತು ವ್ಯಸನಿಗಳು ಹಾಗೂ 3 ಮಂದಿ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 11 ಗ್ರಾಂ ಎಂಡಿಎಂ ಮಾದಕವಸ್ತು, 7 ಗ್ರಾಂ ಹೈಡ್ರಾ ಮ್ಯಾಂಗೋ ಹಾಗೂ 2.5 ಕೆ.ಜಿ. ಗಾಂಜಾ ಜಪ್ತಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ