ಅಕ್ರಮವಾಗಿ ಬಾಲಕಿಯರ ಹಾಸ್ಟೆಲ್ಗೆ ನುಗ್ಗಿದ ಯುವಕನನ್ನು ಬಂಧಿಸಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ನಲ್ಲಿ ನಡೆದಿದೆ.
ಕೋಲಾರ (ಆ.18): ಅಕ್ರಮವಾಗಿ ಬಾಲಕಿಯರ ಹಾಸ್ಟೆಲ್ಗೆ ನುಗ್ಗಿದ ಯುವಕನನ್ನು ಬಂಧಿಸಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ನಲ್ಲಿ ನಡೆದಿದೆ. ಬೇತಮಂಗಲ ನಿವಾಸಿ ಮುರಳಿ (25) ಬಂಧಿತ ಆರೋಪಿ. ಮಧ್ಯರಾತ್ರಿ ಆರೋಪಿ ಯುವಕನೊಬ್ಬ ಬಾಲಕಿಯರ ವಸತಿ ನಿಲಯಕ್ಕೆ ನುಗ್ಗಿದ್ದ.
ಈ ಘಟನೆ ಕುರಿತು ಹಾಸ್ಟೆಲ್ ವಾರ್ಡನ್ ಬೇತಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಈ ಹಿನ್ನಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಮಧ್ಯರಾತ್ರಿ ಹಾಸ್ಟೆಲ್ಗೆ ನುಗ್ಗಿದ ಪರಿಣಾಮ ಭಯಭೀತರಾದ ವಿದ್ಯಾರ್ಥಿಗಳು ಇನ್ನು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಈ ಹಾಸ್ಟೆಲ್ನಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ 6 ರಿಂದ 10 ನೇ ತರಗತಿ ಓದುತ್ತಿರುವ 60 ಕ್ಕೂ ಹೆಚ್ವು ವಿದ್ಯಾರ್ಥಿನಿಯರು ದಾಖಲಾಗಿದ್ದು, ಈ ನಡುವೆ ಮಧ್ಯರಾತ್ರಿ ಅಪರಿಚಿತ ಯುವಕ ಹಾಸ್ಟೆಲ್ಗೆ ನುಗ್ಗಿದ ಪರಿಣಾಮ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ.
ಮಾಟ ಮಂತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಸೋಲಾಗಿದೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ
ಹಾಸ್ಟೆಲ್ನಲ್ಲಿ ಭದ್ರತೆ ಹಾಗೂ ಸುರಕ್ಷತೆ ನೀಡದ ಹಾಸ್ಟೆಲ್ ವಾರ್ಡನ್ ಸೇರಿದಂತೆ ಅಧಿಕಾರಿಗಳ ವಿರುದ್ದ ಸ್ಥಳೀಯರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿಷಯ ತಿಳಿದು ಬೇತಮಂಗಲ ಗ್ರಾಮ ಪಂಚಾಯತಿ ಅಧ್ಯಕ್ಷ ವಿನೂಕಾರ್ತಿಕ್ ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿನಿಯರಿಗೆ ಧೈರ್ಯ ಹೇಳಿದ್ದಾರೆ.