ಬೆಂಗಳೂರು: ಪಾರಿವಾಳ ಹಿಡಿವ ಸೋಗಿನಲ್ಲಿ ಮನೆ ದೋಚುತ್ತಿದ್ದ ಖತರ್ನಾಕ್‌ ಖದೀಮ ಅರೆಸ್ಟ್‌

By Kannadaprabha News  |  First Published Oct 8, 2024, 8:44 AM IST

ಆರೋಪಿಯು ಆರಂಭದಲ್ಲಿ ಕಟ್ಟಡಗಳ ಮೇಲೆ ನಿಂತು ಪಾರಿವಾಳ ಹಾರಿಸುತ್ತಿದ್ದ. ಬಳಿಕ ಪಾರಿವಾಳ ಹಿಡಿದುಕೊಳ್ಳುವ ನೆಪದಲ್ಲಿ ಬೀಗ ಹಾಕಿದ ಮನೆಗಳ ಬೀಗ ಮುರಿದು ಕಳವು ಮಾಡಿ ಪರಾರಿಯಾಗುತ್ತಿದ್ದ. ಹೀಗಾಗ ನಗರದ ಅಪರಾಧ ಜಗತ್ತಿನಲ್ಲಿ ಈತನನ್ನು ಪಾರಿವಾಳ ಮಂಜ ಎಂದೂ ಕರೆಯಲಾಗುತ್ತದೆ. 


ಬೆಂಗಳೂರು(ಅ.08):  ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ರಾತ್ರಿ ವೇಳೆ ಬಿಗ ಮುರಿದು ಕಳವು ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಿಗಳರಪೇಟೆ ನಿವಾಸಿ ಮಂಜುನಾಥ ಅಲಿಯಾಸ್ ಪಾರಿವಾಳ ಮಂಜ(38) ಬಂಧಿತ. ಆರೋಪಿಯಿಂದ 30 ಲಕ್ಷ ರು. ಮೌಲ್ಯದ 475 ಗ್ರಾಂ ಚಿನ್ನಾಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಜಪ್ತಿ ಮಾಡಲಾಗಿದೆ. 

ಕಳೆದ ಏ.5ರಂದು ಚಿಕ್ಕಪೇಟೆ ನಿವಾಸಿ ಉಪೇಶ್ ಭಂಡಾರಿ ಎಂಬುವವರ ಮನೆಯ ಬೀಗ ಮುರಿದು ದುಷ್ಕರ್ಮಿಗಳು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. 

Latest Videos

undefined

ಬೆಂಗಳೂರು: ಮಲಗುವ ವಿಚಾರಕ್ಕೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕಾರ್ಮಿಕನ ಹತ್ಯೆ

ವೃತ್ತಿಪರ ಕಳ್ಳ: 

ಆರೋಪಿ ಮಂಜುನಾಥ ವೃತ್ತಿಪರ ಕಳ್ಳನಾಗಿದ್ದು, ಹಲವು ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾನೆ. ಈತನ ವಿರುದ್ದ ಈ ಹಿಂದೆ ಚಿಕ್ಕ ಪೇಟೆ, ಹಲಸೂರು ಗೇಟ್, ಎಸ್.ಜೆ.ಪಾರ್ಕ್, ಬನಶಂಕರಿ, ಶಂಕರಪುರ, ವಿದ್ಯಾರಣ್ಯಪುರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 30ಕ್ಕೂ ಅಧಿಕ ಮನೆಗಳವು ಪ್ರಕರಣಗಳು ದಾಖಲಾಗಿವೆ. ಹಲವು ಬಾರಿ ಬಂಧನಕ್ಕೆ ಒಳಗಾಗಿದ್ದರೂ ಜಾಮೀನು ಪಡೆದು ಹೊರಗೆ ಬಂದು ಬಳಿಕ ಮತ್ತೆ ತನ್ನ ಕಳವು ಚಾಳಿ ಮುಂದುವರೆಸುತ್ತಿದ್ದ. 

ರಾತ್ರಿ ವೇಳೆ ಕನ್ನ: 

ಆರೋಪಿಯು ಆರಂಭದಲ್ಲಿ ಕಟ್ಟಡಗಳ ಮೇಲೆ ನಿಂತು ಪಾರಿವಾಳ ಹಾರಿಸುತ್ತಿದ್ದ. ಬಳಿಕ ಪಾರಿವಾಳ ಹಿಡಿದುಕೊಳ್ಳುವ ನೆಪದಲ್ಲಿ ಬೀಗ ಹಾಕಿದ ಮನೆಗಳ ಬೀಗ ಮುರಿದು ಕಳವು ಮಾಡಿ ಪರಾರಿಯಾಗುತ್ತಿದ್ದ. ಹೀಗಾಗ ನಗರದ ಅಪರಾಧ ಜಗತ್ತಿನಲ್ಲಿ ಈತನನ್ನು ಪಾರಿವಾಳ ಮಂಜ ಎಂದೂ ಕರೆಯಲಾಗುತ್ತದೆ. ಇತ್ತೀಚೆಗೆ ಹಗಲಿನಲ್ಲಿ ನಗರದ ವಿವಿಧೆಡೆ ಸುತ್ತಾಡಿ ಬೀಗ ಹಾಕಿದ ಮನೆಗಳನ್ನು ಗುರುತಿ ಸಿಕೊಂಡು ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ.

click me!