
ಚಿಕ್ಕಮಗಳೂರು(ಅ.26): ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹುಲಿ ಉಗುರು ಕಾರ್ಯಾಚರಣೆ ಮುಂದುವರಿದಿದೆ. ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನ ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಅವರನ್ನ ಬಂಧಿಸಲಾಗಿದೆ. ಬಂಧಿತರಿಂದ ಮೂರು ಹುಲಿ ಉಗುರುಗಳನ್ನ ವಶಕ್ಕೆ ಪಡೆಯಲಾಗಿದೆ. ಇಬ್ಬರನ್ನ ಬಂಧಿಸಿ ಅರಣ್ಯ ಇಲಾಖೆಯ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ.
News Hour: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಆಪರೇಷನ್ ಹುಲಿ ಉಗುರು!
ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಇಬ್ಬರು ಅರ್ಚಕರನ್ನ ಬಂಧಿಸಿದ್ದಾರೆ. ಬಂಧಿತ ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ