
ಬೆಂಗಳೂರು: ನಟ ದರ್ಶನ್ ಆರಂಭದಲ್ಲಿಯೇ ಕೊಲೆ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ್ದರು ಎಂದು ತಿಳಿದು ಬಂದಿದೆ. ತನ್ನನ್ನು ಬಿಟ್ಟು ಉಳಿದ ಎಲ್ಲರನ್ನ ಬಂಧಿಸುವಂತೆ ದರ್ಶನ್ (Actor Darshan) ಅಮಿಷ ಒಡ್ಡಿದ್ದರು ಎನ್ನಲಾಗಿದೆ. ಇತ್ತ ಬಂಧನಕ್ಕೆ ಒಳಗಾಗಿರುವ ದರ್ಶನ್ ಬಾಡಿಗಾರ್ಡ್‌ಗಳು ಅಣ್ಣನನ್ನು ಬಿಟ್ಟು ಬಿಡಿ ಎಂದು ಪೊಲೀಸರ ಮುಂದೆ ಮನವಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನ್ 9ರಂದು ಪತ್ತೆಯಾದ ರೇಣುಕಾಸ್ವಾಮಿ ಶವದ ಪ್ರಕರಣದ (Renukaswamy Murder Case) ತನಿಖೆ ನಡೆಸಿದಾಗ ದರ್ಶನ್ ಹೆಸರು ಕೇಳಿ ಬಂದಿತ್ತು. ಇದೀಗ ದರ್ಶನ್, ಉದ್ಯಮಿ ವಿನಯ್, ಎರಡನೇ ಪತ್ನಿ ಪವಿತ್ರಾ ಗೌಡ ಸೇರಿದಂತೆ ಹತ್ತಕ್ಕೂ ಜನರ ಬಂಧನವಾಗಿದೆ.
ಇತ್ತ ದರ್ಶನ್ ಭೇಟಿಯಾಗಲು ಠಾಣೆಗೆ ಕೆಲ ನಿರ್ಮಾಪಕರು ಬಂದಿದ್ದರು. ಆದರೆ ಪೊಲೀಸರು ಯಾರಿಗೂ ಭೇಟಿಗೆ ಅವಕಾಶ ನೀಡಿಲ್ಲ. ಇತ್ತ ದರ್ಶನ್ ಪರ ವಕೀಲ ನಾರಾಯಾಣ ಸ್ವಾಮಿ ಠಾಣೆಗೆ ಆಗಮಿಸಿದ್ದು, ಮಾಧ್ಯಮಗಳ ಜೊತೆ ಮಾತನಾಡಿದರು. ದರ್ಶನ್ ಬಂಧನ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ಠಾಣೆಗೆ ಬಂದಿದ್ದಾರೆ. ಭೇಟಿಗೆ ಅವಕಾಶ ಕೇಳಿದ್ದು, ನಂತರ ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇನೆ ಎಂದು ದರ್ಶನ್ ಪರ ವಕೀಲ ನಾರಾಯಾಣಸ್ವಾಮಿ ಹೇಳಿದ್ದಾರೆ.
ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
ನಟ ದರ್ಶನ್ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್, ಬೆಂಗಳೂರಿನಲ್ಲಿ ನಡೆದ ಕೊಲೆ ಸಂಬಂಧ ಪೊಲೀಸರು ಕೆಲವರನ್ನು ಅರೆಸ್ಟ್ ಮಾಡಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಆರೋಪಿಗಳು ದರ್ಶನ್ ಹೆಸರು ಹೇಳಿದ್ದಾರೆ. ಹಾಗಾಗಿ ಅವರನ್ನು ಸಹ ತನಿಖೆಗೆ ಒಳಪಡಿಸಲು ದರ್ಶನ್‌ರನ್ನ ಕರೆದುಕೊಂಡು ಬರಲಾಗಿದೆ. ತನಿಖೆ ಪೂರ್ಣವಾಗುವರೆಗೂ ಏನು ಹೇಳಲು ಆಗಲ್ಲ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೋ ಅಥವಾ ಇಲ್ಲವಾ ಎಂಬುವುದು ಪೊಲೀಸರ ತನಿಖೆಯಲ್ಲಿ ತಿಳಿದು ಬರಲಿದೆ. ಪೊಲೀಸರು ತಮ್ಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಕಾನೂನು ಎಲ್ಲರಿಗೂ ಒಂದೇ ಎಂದ ಡಿಸಿಎಂ
ಈ ಕುರಿತು ಡಿಸಿಎಂ ಡಿಕೆ ಶಿವಮಾರ್ ಪ್ರತಿಕ್ರಿಯಿಸಿದ್ದು, ದರ್ಶನ್ ಅರೆಸ್ಟ್ ಆಗಿರೋ ಮಾಹಿತಿ ನನಗೆ ಗೊತ್ತಿಲ್ಲ. ನಾನು ಯಾವುದೇ ಪೇಪರ್ ನೋಡಿಲ್ಲ. ಟಿವಿ ನೋಡಲು ಸಮಯ ಸಿಕ್ಕಿಲ್ಲ. ಗೃಹ ಸಚಿವರು ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿರುತ್ತಾರೆ. ಹಾಗಾಗಿ ಹೋಮ್ ಮಿನಿಸ್ಟರ್ ಜೊತೆ ಮಾತನಾಡಿ ಮಾಹಿತಿ ಪಡೆದುಕೊಳ್ಳಿ ಎಂದ ಅವರು, ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದರು.
ದರ್ಶನ್ ಅವರದ್ದು ತಾಯಿ ಹೃದಯ
ಸತ್ಯಾಂಶ ಏನು ಅನ್ನೋದು ತನಿಖೆಯಿಂದ ಹೊರ ಬರಬೇಕು. ಯಾರು ಸಹ ಸುಳ್ಳು ವದಂತಿಗಳಿಗೆ ಕಿವಿ ಕೊಡಬಾರದು. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡಲಾಗುವುದು. ದರ್ಶನ್ ಭೇಟಿಗೆ ಬಂದಿದ್ದೀವಿ, ಆದ್ರೆ ವಿಚಾರಣೆ ನಡೆಯುತ್ತಿರುವ ಹಿನ್ನೆಲೆ ಪೊಲೀಸರು ಒಳಗೆ ಬಿಡಲಿಲ್ಲ. ನಾನು ದರ್ಶನ್ ಅವರನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ದರ್ಶನ್ ಅವರದ್ದು ತಾಯಿ ಹೃದಯವಾಗಿದ್ದು, ಅವರ ಸಾಮಾಜಿಕ ಕಾರ್ಯಗಳು ಎಲ್ಲರಿಗೂ ಗೊತ್ತಿದೆ ಎಂದು ನಟ ಜಿಮ್ ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ