ದೇಶದ್ರೋಹಿ ಘೋಷಣೆ: ಅಮೂಲ್ಯ ಲಿಯೋನಾ ಜತೆ ಪರಪ್ಪನ ಅಗ್ರಹಾರ ಸೇರಿದ ಅರುದ್ರಾ

By Suvarna News  |  First Published Feb 21, 2020, 9:04 PM IST

ಗುರುವಾರ ಅಷ್ಟೇ ಅಮೂಲ್ಯ ಲಿಯೋನಾ ಪಾಕಿಸ್ತಾನ್ ಜಿಂದಾಬಾದ್ ಕೂಗಿ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಾಳೆ. ಇರದ ಬೆನ್ನಲ್ಲೇ ಮಹಾಶಿವರಾತ್ರಿ ದಿನದಂದು ತೃತಿಯ ಲಿಂಗಿಯೊಬ್ಬಳು ಪಾಕ್ ಪರ ಘೋಷಣೆ ಕೂಗಿ ಅಮೂಲ್ಯ ಇರುವ ಪರಪ್ಪನ ಅಗ್ರಹಾರ ಪಾಲಾಗಿದ್ದಾಳೆ.


ಬೆಂಗಳೂರು(ಫೆ.21): ಪಾಕಿಸ್ತಾನ ಪರ ಘೋಷಣೆ ಕೂಗಿದ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರುದ್ರಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 

ಬೆಂಗಳೂರು ನಗರದ 6ನೇ ಎಸಿಎಂಎ ನ್ಯಾಯಾಧೀಶ ಕೃಷ್ಣಮೂರ್ತಿ ಅವರು ದೇಶದ್ರೋಹಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಮಾರ್ಚ್​​​​ 5ರವೆಗೂ ನ್ಯಾಯಾಂಗ ಬಂಧನದಲ್ಲಿರುವ ಅರುದ್ರಾಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದೆ.

Tap to resize

Latest Videos

'ಪಾಕ್‌ ಜಿಂದಾಬಾದ್’ ಎಂದ ಆರುದ್ರಾ..! ಅವನಲ್ಲ ಅವಳು..!

ಗುರುವಾರ ಅಷ್ಟೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವ ಮೂಲಕ ವಿವಾದ ಸೃಷ್ಟಿಸಿದ್ದ ಅಮೂಲ್ಯ ಲಿಯೋನಾ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ ಟೌನ್ ಹಾಲ್ ಬಳಿ ಹಿಂದೂಪರ ಸಂಘಟನೆಗಳು ಅಮೂಲ್ಯ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲೀಗ ಮತ್ತೋರ್ವ ಯುವತಿ ಪಾಕಿಸ್ತಾನ ಜಿಂದಾಬಾದ್​ ಎಂಬ ಘೋಷಣೆ ಕೂಗಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಹೀಗೆ ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎನ್ನಲಾದ ಯುವತಿಯನ್ನು ಅರುದ್ರಾ ಎಂದು ಗುರುತಿಸಲಾಗಿದೆ.

ನಿನ್ನೆಯಷ್ಟೇ ಎನ್ಎಂಕೆಆರ್ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಲಿಯೋನಾ, ಫ್ರೀಡಂಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಳು. ದೇಶದ್ರೋಹಿ ಹೇಳಿಕೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು  ಟೌನ್ಹಾಲ್ ಬಳಿ ಪ್ರತಿಭಟನೆ ನಡೆಸಿದ್ರು. ಈ ವೇಳೆ ಬಂದ ಆರ್ದ್ರಾ, ಫ್ರೀ ಕಾಶ್ಮೀರ, ಕಾಶ್ಮೀರ ಮುಕ್ತಿ,  ಪ್ರದರ್ಶಿಸಿದ್ದಾಳೆ. 

ಪಾಕ್ ಜಿಂದಾಬಾದ್ ಎಂದವಳು ನನ್ನ ಮಗಳೇ ಅಲ್ಲ ಎಂದ ಅಮೂಲ್ಯ ತಂದೆ

ಈ ವೇಳೆ ಪೊಲೀಸರು ಆಕೆಯನ್ನು ಬಂಧಿಸಲು ಮುಂದಾಗಿದ್ದಾರೆ.  ಆಗ  ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾಳೆ. ಆಗ ಅಲ್ಲೇ ಇದ್ದ ಪ್ರತಿಭಟನಾಕಾರರು ರೊಚ್ಚಿಗೆದ್ದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 ಪೊಲೀಸರು, ಅರುದ್ರಾ ಆರ್ದ್ರಾ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡು 153 (a) ಎರಡು ಗುಂಪುಗಳ ನಡುವೆ ಶತೃತ್ವ ಬಿತ್ತುವುದು,153 (b) ರಾಷ್ಟ್ರೀಯ ಭಾವೈಕ್ಯತೆ, ಐಕ್ಯತೆಗೆ ಧಕ್ಕೆ ಆರೋಪದ ಮೇಲೆ SJ ಪಾರ್ಕ್ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.

click me!