
ಕೊಡಗು (ಜುಲೈ.26): ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಂಬೂರು ಎಸ್ಟೇಟ್‌ನಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಲಾಲ್ ಬಿಲ್ (28) ಎಂದು ಗುರುತಿಸಲಾಗಿದೆ. ಮಾದಾಪುರ ಪೊಲೀಸ್ ಉಪಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ತೋಟದಲ್ಲಿ ಗೋಮಾಂಸ ಮಾರಾಟದ ಕುರಿತು ಖಚಿತ ಮಾಹಿತಿ ಪಡೆದು ಪೊಲೀಸರಿಗೆ ತಿಳಿಸಿದ್ದರು. ಈ ಮಾಹಿತಿಯನ್ನಾಧರಿಸಿ, ಮಾದಾಪುರ ಪೊಲೀಸರು ದಾಳಿ ನಡೆಸಿ 15 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಕೊಡಗಿನ ಭೂಕುಸಿತ, ತಡೆಗೋಡೆಗೆ 50 ಕೋಟಿ ರೂ. ಅನುದಾನ: ಸಚಿವ ಕೃಷ್ಣಬೈರೇಗೌಡ ಘೋಷಣೆ
ಕೊಡಗು ಜಿಲ್ಲೆಯಲ್ಲಿ ಗೋಹತ್ಯೆ ಮತ್ತು ಗೋಮಾಂಸ ಮಾರಾಟವನ್ನು ಕಾನೂನು ನಿಷೇಧಿಸಿದ್ದರೂ, ಇಂತಹ ಪ್ರಕರಣಗಳು ಪದೇಪದೇ ಕಂಡುಬರುತ್ತಿವೆ. ಈ ಘಟನೆಗೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಭೋಜೇಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಪೊಲೀಸ್ ಇಲಾಖೆಯ ನಿರ್ಲಕ್ಷ್ಯದಿಂದಾಗಿಯೇ ಇಂತಹ ಅಕ್ರಮ ಚಟುವಟಿಕೆಗಳು ಮರುಕಳಿಸುತ್ತಿವೆ. ಕಾನೂನಿನ ಕಟ್ಟುನಿಟ್ಟಾದ ಜಾರಿಯಾಗಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ