ಬೆಳಗಾವಿ: ವೇಶ್ಯಾವಾಟಿಕೆ ಆರೋಪ, ರಸ್ತೆಯಲ್ಲೇ ಮಹಿಳೆಯ ಬಟ್ಟೆ ಹರಿದು ಹಲ್ಲೆ

Published : Nov 17, 2024, 08:44 AM ISTUpdated : Nov 17, 2024, 12:45 PM IST
ಬೆಳಗಾವಿ: ವೇಶ್ಯಾವಾಟಿಕೆ ಆರೋಪ, ರಸ್ತೆಯಲ್ಲೇ ಮಹಿಳೆಯ ಬಟ್ಟೆ ಹರಿದು ಹಲ್ಲೆ

ಸಾರಾಂಶ

ವೇಶ್ಯಾವಾಟಿಕೆಯ ಆರೋಪ ಹೊರಿಸಿ ಅಕ್ಕಪಕ್ಕದ ಮನೆಯವರೇ ಮನೆಗೆ ನುಗ್ಗಿ ತಾಯಿ, ಮಗಳನ್ನು ಹೊರಗೆ ಎಳೆದು ತಂದು ಬಟ್ಟೆ ಬಿಚ್ಚಿ ಹಲ್ಲೆ ಮಾಡಿದ್ದು, ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕೃತ್ಯದ ವಿಡಿಯೋ ಕೂಡ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್ ಕೂಡ ಆಗಿದೆ.  ಮಾಧ್ಯಮಗಳ ಮೂಲಕ ಮಾಹಿತಿ ತಿಳಿದ ಮಾಳಮಾರುತಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. 

ಬೆಳಗಾವಿ(ನ.17): ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಈಗ ಅಂತಹದ್ದೇ ಮತ್ತೊಂದು ಅಮಾನವೀಯ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. 

ನಗರದ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆಯ ಆರೋಪ ಹೊರಿಸಿ ಅಕ್ಕಪಕ್ಕದ ಮನೆಯವರೇ ಮನೆಗೆ ನುಗ್ಗಿ ತಾಯಿ, ಮಗಳನ್ನು ಹೊರಗೆ ಎಳೆದು ತಂದು ಬಟ್ಟೆ ಬಿಚ್ಚಿ ಹಲ್ಲೆ ಮಾಡಿದ್ದು, ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕೃತ್ಯದ ವಿಡಿಯೋ ಕೂಡ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್ ಕೂಡ ಆಗಿದೆ.  ಮಾಧ್ಯಮಗಳ ಮೂಲಕ ಮಾಹಿತಿ ತಿಳಿದ ಮಾಳಮಾರುತಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. 

ಚಿಕ್ಕೋಡಿ: ಗಂಡನ ಸಂಶಯಕ್ಕೆ ಬೇಸತ್ತು ಮಗುವಿಗೆ ಚಾಕು ಇರಿದು ಕೊಂದ ತಾಯಿ!

2 ದಿನ ಅಲೆದರೂ ದೂರು ಸ್ವೀಕರಿಸದ ಪೊಲೀಸರು: 

ಸಂಬಂಧ ಇಲ್ಲದವರೆಲ್ಲರೂ ಮನೆಗೆ ಬಂದು ಹೋಗುತ್ತಿದ್ದು, ವೇಶ್ಯಾವಾಟಿಕೆ ದಂಧೆ ಮಾಡುತ್ತಿರುವ ತಾಯಿ ಮತ್ತು ಮಗಳು ಮನೆ ಬಿಡುವಂತೆ ನೆರೆಯವರು ಜಗಳ ತೆಗೆದಿದ್ದರು. ಜಗಳ ವಿಕೋಪಕ್ಕೆ ಹೋಗಿದ್ದು, ಮಹಿಳೆಯನ್ನು ಎಳೆದಾಡಿ ಬಟ್ಟೆ ಹರಿದು ಹಲ್ಲೆ ನಡೆಸಲಾಗಿದೆ. ಹಲ್ಲೆ ಬಳಿಕ ಸಂತ್ರಸ್ತೆ ದೂರು ನೀಡಲು ಮಾಳಮಾರುತಿ ಠಾಣೆಗೆ 2 ದಿನ ಅಲೆದರೂ ಪೊಲೀಸರು ದೂರು ಸ್ವೀಕರಿಸಲಿಲ್ಲ. ಹಾಗಾಗಿ, ನಮಗೆ ಜೀವ ಭಯವಿದ್ದು, ರಕ್ಷಣೆ ಕೊಡುವಂತೆ ಸಂತ್ರಸ್ತೆ ಪೊಲೀಸ್ ಆಯುಕ್ತರಿಗೆ ಮನವಿ ನೀಡಿದ್ದರು. ಬಳಿಕ ಶುಕ್ರವಾರ ರಾತ್ರಿ ಬಿಎನ್ಎಸ್ ಕಾ ಯ್ದೆಯ ಸೆಕ್ಷನ್ 115(2), 3(5), 331, 352 ಹಾಗೂ 74ರ ಅಡಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. 

ಸಂತ್ರಸ್ತ ಯುವತಿ ಅಳಲು: 

ವಡ್ಡರವಾಡಿಯಲ್ಲಿರುವ ನಮ್ಮ ಮನೆಯ ಜಾಗವನ್ನು ದೇವಸ್ಥಾನಕ್ಕೆ ಬರೆಸಿಕೊಳ್ಳುವ ದುರುದ್ದೇಶದಿಂದ ನೆರೆಹೊರೆಯವರೇ ನನ್ನ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಶನಿವಾರ ಸಂತ್ರಸ್ತ ಯುವತಿ ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ