ರಾಯಚೂರು: ಸಹಾಯಕ ಆಯುಕ್ತರ ನೌಕರ ಆತ್ಮಹತ್ಯೆ, ಕಾರಣ ನಿಗೂಢ?

By Kannadaprabha NewsFirst Published Feb 11, 2024, 1:00 AM IST
Highlights


ವಾಸಿಂ ಕಚೇರಿಯಲ್ಲಿ ಚನ್ನಾಗಿ ಕೆಲಸ ಮಾಡುತ್ತಿದ್ದ. ಯಾವುದೇ ರೀತಿಯ ಒತ್ತಡಗಳು ಇರಲಿಲ್ಲ. ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ ಸಹಾಯಕ ಆಯುಕ್ತೆ ಮಹಿಬೂಬಿ

ರಾಯಚೂರು(ಫೆ.11): ಇಲ್ಲಿನ ಸಹಾಯಕ ಆಯುಕ್ತರ ಕಚೇರಿಯ ಡಿ ದರ್ಜೆ ನೌಕರ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ನಡೆದಿದೆ. ಎಸಿ ಕಚೇರಿಯ ಭೂ ದಾಖಲೆಗಳ ವಿಭಾಗದ ಕೀಪರ್ ಹುದ್ದೆಯಲ್ಲಿದ್ದ ವಾಸೀಂ ಚೌಧರಿ (40) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಾಹ್ನದವರೆಗೂ ಕಚೇರಿಯಲ್ಲಿ ಕೆಲಸ ಮಾಡಿದ್ದು, ಗುರುವಾರ ಸಂಜೆ ನಗರದ ಜಿಲ್ಲಾ ಕ್ರೀಡಾಂಗಣ ಬಳಿಯ ಈಜುಕೊಳದ ಸಮೀಪ ವಾಹನಗಳಿಗೆ ಬಳಸುವ ಕೂಲೆಂಟ್ ವಾಟರ್ ಜತೆಗೆ ಆಸಿಡ್ ಬೆರೆಸಿ ಕುಡಿದಿದ್ದಾರೆ ಎಂದು ತಿಳಿದು ಬಂದಿದೆ.

ನರಳಾಡುತ್ತಿದ್ದ ಈತನನ್ನು ಗಮನಿಸಿದ ಸ್ಥಳೀಯರು ಕೂಡಲೇ ಖಾಸಗಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್ ಗೆ ಕಳುಹಿಸಿದ್ದರು. ಶುಕ್ರವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 

ಅಪ್ರಾಪ್ತ ವಯಸ್ಸಿನಲ್ಲೇ ಕಾರ್ ಡ್ರೈವರ್ ಜೊತೆ ಲವ್; ಮನೆಯವ್ರು ವಿರೋಧಿಸಿದ್ದಕ್ಕೆ ಬಾಲಕಿ ಆತ್ಮಹತ್ಯೆ!

ಈ ಕುರಿತು ಪ್ರತಿಕ್ರಿಯಿಸಿರುವ ಸಹಾಯಕ ಆಯುಕ್ತೆ ಮಹಿಬೂಬಿ, ವಾಸಿಂ ಕಚೇರಿಯಲ್ಲಿ ಚನ್ನಾಗಿ ಕೆಲಸ ಮಾಡುತ್ತಿದ್ದ. ಯಾವುದೇ ರೀತಿಯ ಒತ್ತಡಗಳು ಇರಲಿಲ್ಲ. ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

click me!