
ಹಾವೇರಿ(ಜೂ.07): ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು(ಮಂಗಳವಾರ) ನಡೆದಿದೆ.
ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಗಂಭೀರವಾದ ಆರೋಪ ಕೇಳಿ ಬಂದಿದೆ. ನಿಂಗಪ್ಪ ಕಲಕೋಟಿ ಎಂಬುವವರು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿ ಪಾಠ ಹೇಳಿಕೊಡುವುದಾಗಿ ಮನೆಗೆ ಕರೆಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಒಂದೇ ತಿಂಗಳಲ್ಲಿ ಆರು ಬಾರಿ ಅಪ್ರಾಪ್ತೆಯ ರೇಪ್, ಗೆಳತಿಯರಿಂದಲೇ ಷಡ್ಯಂತ್ರ!
ಒಂದೂವರೆ ವರ್ಷಗಳಿಂದ ನಿಂಗಪ್ಪ ಕಲಕೋಟಿ ವಿದ್ಯಾರ್ಥಿನಿ ಮೇಲೆ ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಲೈಂಗಿನ ದೌರ್ಜನ್ಯ ಎಸಗಿದ್ದಲ್ಲದೆ ನಿಂಗಪ್ಪ ಕಲಕೋಟಿ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಹಾಕಿದ್ದಾರೆ.
ಆರೋಪಿ ನಿಂಗಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಂಗಪ್ಪ ಎಸಗಿದ ಕೃತ್ಯದಿಂದ ಕಾಲೇಜು ವಿದ್ಯಾರ್ಥಿನಿ ಇದೀಗ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ.
ಸದ್ಯ ಸಂತ್ರಸ್ತ ವಿದ್ಯಾರ್ಥಿನಿಯನ್ನು ಹಾವೇರಿ ನಗರದ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ. ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ವಿರುದ್ಧ ನೊಂದ ವಿದ್ಯಾರ್ಥಿನಿ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ