Bengaluru Crime: ನಿಲ್ಲಿಸಿದ್ದ ಕಾರಿಗೆ ರಾತ್ರಿ ಪೆಟ್ರೋಲ್‌ ಸುರಿದು ಬೆಂಕಿ ಇಟ್ಟದುರುಳರು

By Kannadaprabha NewsFirst Published Jan 9, 2023, 10:05 AM IST
Highlights

ಮನೆ ಎದುರು ನಿಲ್ಲಿಸಿದ್ದ ಕಾರಿಗೆ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ಮಹಾಲಕ್ಷ್ಮಿ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೆ.ಸಿ.ನಗರ (JP nagar) ನಿವಾಸಿ ಸುಬ್ರಹ್ಮಣ್ಯ ಎಂಬುವವರಿಗೆ ಸೇರಿದ ಮಹೀಂದ್ರ ಎಕ್ಸ್‌ಯುವಿ 300(Mahindra XUV300) ಕಾರು ಸುಟ್ಟು ಕರಕಲಾಗಿದೆ.

ಬೆಂಗಳೂರು (ಜ.9) : ಮನೆ ಎದುರು ನಿಲ್ಲಿಸಿದ್ದ ಕಾರಿಗೆ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ಮಹಾಲಕ್ಷ್ಮಿ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೆ.ಸಿ.ನಗರ (JP nagar) ನಿವಾಸಿ ಸುಬ್ರಹ್ಮಣ್ಯ ಎಂಬುವವರಿಗೆ ಸೇರಿದ ಮಹೀಂದ್ರ ಎಕ್ಸ್‌ಯುವಿ 300(Mahindra XUV300) ಕಾರು ಸುಟ್ಟು ಕರಕಲಾಗಿದೆ. ಜೆ.ಸಿ.ನಗರದ ಪೈಪ್‌ಲೈನ್‌ ರಸ್ತೆ(Pipeline road)ಯ 22ನೇ ಮುಖ್ಯರಸ್ತೆಯಲ್ಲಿ ಭಾನುವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ದುಷ್ಕೃತ್ಯ ಸಿಸಿಟಿವಿ ಕ್ಯಾಮರಾ(CCTV Camer)ದಲ್ಲಿ ಸೆರೆಯಾಗಿದೆ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಲ್ಮೆಟ್‌ ಧರಿಸಿದ್ದ ಇಬ್ಬರು ದುಷ್ಕರ್ಮಿಗಳು ಪಕ್ಕದ ಬೀದಿಯಲ್ಲಿ ತಮ್ಮ ದ್ವಿಚಕ್ರವಾಹನ ನಿಲ್ಲಿಸಿದ್ದಾರೆ. ಬಳಿಕ ನಡೆದುಕೊಂಡು ಸುಬ್ರಹ್ಮಣ್ಯ ಅವರ ಮನೆ ಬಳಿಗೆ ಬಂದು ಕಾರಿನ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿಯಿಂದ ಇಡೀ ಕಾರು ಸುಟ್ಟು ಕರಕಲಾಗಿದೆ. ಕಾರು ಹೊತ್ತಿ ಉರಿಯುವ ಸಂದರ್ಭದಲ್ಲಿ ಮನೆಗಳಿಗೂ ಹಾನಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Crime News: ಬಡ ರೈತನ ಗುಡಿಸಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; 50 ಸಾವಿರ ರೂ. ಮೌಲನ್ಯ ದಿನಸಿ ಸಾಮಗ್ರಿ ಸುಟ್ಟು ಭಸ್ಮ

ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕಾರಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿರುವ ಸಾಧ್ಯತೆಯಿದೆ. ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರ ಆಧಾರದ ಮೇಲೆ ಬಂಧನಕ್ಕೆ ಶೋಧಿಸಲಾಗುತ್ತಿದೆ. ಮೂರು ತಿಂಗಳ ಹಿಂದೆಯೂ ಮನೆ ಎದುರು ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು ಎನ್ನಲಾಗಿದೆ. ಮಹಾಲಕ್ಷ್ಮಿ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

click me!