ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿಗೆ ಘರ್ಷಣೆ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಕೋಲಾರ (ಸೆ.16): ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿಗೆ ಘರ್ಷಣೆ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ. ನಗರದ ಕ್ಲಾಕ್ ಟವರ್ ಬಳಿ ಮೆರವಣಿಗೆ ಸಾಗುವಾಗ ಮಾತಿಗೆ ಮಾತು ಬೆಳೆದು ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿದೆ. ಈ ಸಂದರ್ಭದಲ್ಲಿ ಮಾರಕಾಸ್ತ್ರಗಳಿಂದ ಒಂದು ಗುಂಪು ಥಳಿಸಿದೆ.
ಸೈಯದ್ ಸಲ್ಮಾನ್, ಸೈಫ್, ಹುಸೇನ್ ಕಾಷಿಪ್, ಕಲೀಲ್ ಅಹಮದ್ ಎಂಬುವರಿಗೆ ಗಾಯವಾಗಿದ್ದು, ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಯ್ಯದ್ ವಸೀಂ ಪಾಷಾ, ಥಾಹೀರ್ ಗುಂಪಿನಿಂದ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಸ್ಥಳಕ್ಕೆ ಧಾವಿಸಿದ್ದು, ಗುಂಪುಗೂಡಿದ್ದ ಜನರನ್ನು ಚದುರಿಸಿದರು.
undefined
ರಾಹುಲ್ ಗಾಂಧಿಯದ್ದು ಮಾನವ ಜಾತಿ: ಸಚಿವ ವೆಂಕಟೇಶ್
ಬಳಿಕ ಮೆರವಣಿಗೆ ಮುಂದೆ ಸಾಗಿತು.ಇದಾದ ಬಳಿಕ ಗಾಯಳುಗಳು ದಾಖಲಾಗಿದ್ದ ಕೋಲಾರ ಜಿಲ್ಲಾಸ್ಪತ್ರೆಯ ಬಳಿ 300 ಕ್ಕೂ ಹೆಚ್ಚು ಜನರು ಜಮಾವಣೆ ಆಗುತ್ತಿದಂತೆ ಮುನ್ನೆಚ್ಚರಿಕೆ ವಹಿಸಿದ ಪೊಲೀಸರು ಗುಂಪನ್ನು ಚದುರಿಸಿ ಕಳುಹಿಸಿದರು.ನಗರದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು,ಕೋಲಾರ ನಗರ ಪೊಲೀಸ್ ಠಾಣ ವ್ಯಾಪ್ತಿ ಈ ಘಟನೆ ನಡೆದಿದೆ.