
ಮಡಿಕೇರಿ (ಮಾ.5) : ಹುಲಿ ಉಗುರು ಮತ್ತು ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಮಡಿಕೇರಿ ಅರಣ್ಯ ಸಂಚಾರಿ ದಳ ಪತ್ತೆ ಹಚ್ಚಿದ್ದು, ಮಾಲು ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಶ್ರೀ ಆಂಜನೇಯ ದೇವಸ್ಥಾನದಿಂದ ದೇಚೂರಿಗೆ ತೆರಳುವ ರಸ್ತೆಯಲ್ಲಿ ಪಿ.ಬಿ. ಸೂರ್ಯ ಪ್ರಕಾಶ್(PB Suryaprakash) ಎಂಬಾತ ಹುಲಿಯ 4 ಉಗುರು(tiger claw)ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ. ಈ ಬಗ್ಗೆ ಮಾಹಿತಿ ಅರಿತ ಮಡಿಕೇರಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿ ಹುಲಿ ಉಗುರು ಸಹಿತ ಆರೋಪಿಯನ್ನು ವಶಕ್ಕೆ ಪಡೆದರು.
ನಗರದ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ ಬಿ. ವೇಣು(B Venu) ಎಂಬಾತ ಅಳಿವಿನಂಚಿನಲ್ಲಿರುವ ಒಂದು ನಕ್ಷತ್ರ ಆಮೆ(star turtle)ಯನ್ನು ಮಾರಾಟ ಮಾಡಲು ಯತ್ನಿಸಿದ್ದಾನೆ ಎನ್ನುವ ಆರೋಪದಡಿ ದಾಳಿ ನಡೆಸಿದ ಮಡಿಕೇರಿ ಅರಣ್ಯ ಸಂಚಾರಿ ದಳ(Madikeri Forest Traffic Division)ದ ಅಧಿಕಾರಿಗಳು ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ.
ಗಿಳಿ, ಆನೆ ದಂತ ಮಾರಾಟಕ್ಕೆ ಯತ್ನ; ಆರು ಮಂದಿ ಬಂಧನ
ಒಂದು ಜೀವಂತ ನಕ್ಷತ್ರ ಆಮೆಯನ್ನು ವಶಕ್ಕೆ ಪಡೆಯಲಾಗಿದ್ದು, ಬಂಧಿತ ಇಬ್ಬರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ. ಶರತ್ ಚಂದ್ರ, ಸಿಐಡಿ ಪೊಲೀಸ್ ಅರಣ್ಯ ಘಟಕದ ಕೊಡಗು ಪೊಲೀಸ್ ಅಧೀಕ್ಷಕ ಕೆ.ಬಿ. ವಿಶ್ವನಾಥ್ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ಸಿ.ಯು. ಸವಿ, ಸಿಬ್ಬಂದಿ ಶೇಖರ್, ರಾಘವೇಂದ್ರ, ಯೋಗೇಶ್, ಉಮೇಶ್, ಮೋಹನ್, ಸ್ವಾಮಿ ಮತ್ತು ಮಂಜುನಾಥ್ ಅವರು ಕಾರ್ಯಾಚರಣೆ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ