
ಶಿಗ್ಗಾಂವಿ(ಮೇ.18): ವಿವಾಹಿತ ಮಹಿಳೆಯ ಮನೆಗೆ ನುಗ್ಗಿದ ಯುವಕರಿಬ್ಬರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಇರ್ಫಾನ್, ಮೈನು ದೌರ್ಜನ್ಯ ಎಸಗಿದ ಆರೋಪಿಗಳು. ಇವರು ಏಕಾಏಕಿ ವಿವಾಹಿತ ಮಹಿಳೆಯ ಮನೆಗೆ ನುಗ್ಗಿದ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದರು. ಈ ವೇಳೆ, ಬಿಡಿಸಲು ಬಂದ ಮಹಿಳೆಯ ಗಂಡ ಹಾಗೂ ಮಗನ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ.
ಹಾಸನ: ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ
ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ತಮ್ಮ ಬಳಿ, ಮಹಿಳೆಯ ಫೋಟೊ, ವಿಡಿಯೋಗಳಿದ್ದು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಆಕೆಯ ಮಾನ ಕಳೆಯುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆಕೆಯ ಪತಿ ತಡಸ ಠಾಣೆಗೆ ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ