
ತುಮಕೂರು(ಜೂ.27): ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಕದ್ದ ಚಿನ್ನದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ ಫ್ರೇಜರ್ ಟೌನ್ ನಿವಾಸದ ಬಳಿ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ ತುರುವೇಕೆರೆ ಸಿಪಿಐ ಲೋಹಿತ್ ಬಿ.ಎನ್ ಹಾಗೂ ತಂಡದಿಂದ ಬಂಧಿಸಲಾಗಿದೆ. ಹಗಲು ಕಳ್ಳತನದ ಆರೋಪಿ ಉದಯ್ ಅಲಿಯಾಸ್ ಅಶೋಕ್, ತನ್ನ ಹೆಂಡತಿ ಶಾರದಾ ಮೂಲಕ ಅಟ್ಟಿಕಾ ಬಾಬುಗೆ ಚಿನ್ನ ಮಾರಾಟ ಮಾಡಿಸುತ್ತಿದ್ದನು. ತುರುವೇಕೆರೆ ವ್ಯಾಪ್ತಿಯಲ್ಲಿ ಕದ್ದ ಚಿನ್ನವನ್ನು ಅಟ್ಟಿಕಾ ಬಾಬು ಖರೀದಿ ಮಾಡುತ್ತಿರುವ ಕುರಿತು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ.
ಗುರಾಯಿಸಿದ್ದಕ್ಕೆ ಬಿತ್ತು ಹೆಣ: ಬನ್ನೇರುಘಟ್ಟ ರಸ್ತೆಯಲ್ಲಿ ಭೀಕರ ಹತ್ಯೆ!
ಶಾರದಾ ಮೂಲಕ ಜಿಗಣಿಯಲ್ಲಿರುವ ಅಟ್ಟಿಕಾ ಗೋಲ್ಡ್ ಕಂಪನಿಯಲ್ಲಿ ಉದಯ್ ಅಲಿಯಾಸ್ ಅಶೋಕ್ ಮಾರಾಟ ಮಾಡಿಸಿದ್ದ. ಪ್ರಕರಣ ದಾಖಲಾದ ಬಳಿಕ ಪೊಲೀಸರು ತನಿಖೆ ಮಾಡಿದ್ದರು. ಕಳ್ಳತನ ಮಾಡಿದ ಚಿನ್ನಾಭರಣವನ್ನು ಖರೀದಿಸಿದ್ದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರ ತಂಡವು ಬೆಂಗಳೂರಿಗೆ ಹೋಗಿ, ಅಟ್ಟಿಕಾ ಬಾಬು ಅವರನ್ನು ಬಂಧಿಸಿದ್ದಾರೆ. ಪೊಲೀಸರು ಅಟ್ಟಿಕಾ ಬಾಬು ಅವರನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ