
ಬೆಂಗಳೂರು(ಡಿ.07): ವೈಯಕ್ತಿಕ ಕಾರಣ ಹಿನ್ನೆಲೆಯಲ್ಲಿ ಆಟೋ ಚಾಲಕನೊಬ್ಬನ ಮೇಲೆ ಪರಿಚಿತರೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬ್ಯಾಟರಾಯನಪುರ ನಿವಾಸಿ ಅರುಣ್ (40) ಕೊಲೆಯಾದ ದುರ್ದೈವಿ. ಈ ಕೃತ್ಯ ಸಂಬಂಧ ಜೆ.ಜೆ.ನಗರದ ಅಪ್ಪು, ಮನು ಹಾಗೂ ಹರೀಶ್ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ರಸ್ತೆಯ ಟಿಂಬರ್ ಲೇಔಟ್ ಸಮೀಪ ತನ್ನ ಗೆಳೆಯರ ಜತೆ ಮಂಗಳವಾರ ರಾತ್ರಿ ಅರುಣ್ ಮಾತನಾಡುತ್ತ ನಿಂತಿದ್ದಾಗ ಆತನ ಮೇಲೆ ಹಂತಕರು ಎರಗಿದ್ದಾರೆ. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅರುಣ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ನೀಲಗಿರಿ ಮರಕ್ಕಾಗಿ ಫೈಟ್, ವ್ಯಕ್ತಿಯೊಬ್ಬನಿಗೆ ಗುಂಡಿಟ್ಟು ಸಾಯಿಸಿದ ಕಿರುತೆರೆ ನಟ!
ಬ್ಯಾಟರಾಯನಪುರದ ಸ್ಯಾಟಲೈಟ್ ಬಸ್ ನಿಲ್ದಾಣ ಸಮೀಪ ಎಟಿಸಿಸಿ ಕ್ವಾಟ್ರರ್ಸ್‌ನಲ್ಲಿ ನೆಲೆಸಿದ್ದ ಅರುಣ್, ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. ಈ ಹಿಂದೆ ಆತನ ಮೇಲೆ ಕೊಲೆ ಯತ್ನ ಪ್ರಕರಣವೊಂದು ಬ್ಯಾಟರಾಯನಪುರ ಠಾಣೆಯಲ್ಲಿ ದಾಖಲಾಗಿತ್ತು. ವೈಯಕ್ತಿಕ ವಿಚಾರವಾಗಿ ಜೆ.ಜೆ.ನಗರದ ಅಪ್ಪು ಹಾಗೂ ಆತನ ಸ್ನೇಹಿತರಿಗೂ ಅರುಣ್ ಮಧ್ಯೆ ಮನಸ್ತಾಪ ಬೆಳೆದಿತ್ತು. ಈ ಹಿನ್ನಲೆಯಲ್ಲಿ ಅರುಣ್‌ನನ್ನು ಹೊಂಚು ಹಾಕಿ ಆರೋಪಿಗಳು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ