
ಬೆಂಗಳೂರು(ಆ.30): ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಚುಂಬಿಸಿ ಪ್ರೀತಿಸುವಂತೆ ಹೇಳಿದ ಆಟೋ ಚಾಲಕ ಇದೀಗ ಪೀಣ್ಯ ಪೊಲೀಸರ ಅತಿಥಿಯಾಗಿದ್ದಾನೆ. 16 ವರ್ಷದ ಬಾಲಕಿ ತಾಯಿ ಕೊಟ್ಟ ದೂರಿನ ಮೇರೆಗೆ ಆರೋಪಿ ಆಟೋ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಾಲಕಿ ಚಿಕ್ಕದೊಡ್ಡ ಬಿದರಕಲ್ಲು ನಿವಾಸಿಯಾಗಿದ್ದು, ಇದೇ ಪ್ರದೇಶದಲ್ಲಿ ಆರೋಪಿ ವಾಸವಾಗಿದ್ದ. ಬಾಲಕಿಯನ್ನು ಪ್ರೀತಿಸುತ್ತಿದ್ದ, ಒಮ್ಮೆ ತನ್ನ ಪ್ರೀತಿಯನ್ನು ನಿವೇದನೆ ಮಾಡಿಕೊಳ್ಳಲು ಯತ್ನಿಸಿದ್ದ. ಆದರೆ ಇದಕ್ಕೆ ಯುವತಿ ಸೊಪ್ಪು ಹಾಕಿರಲಿಲ್ಲ. ಶನಿವಾರ ಸಂಜೆ ಬಾಲಕಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಳು. ಅದೇ ರಸ್ತೆಯಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದಿದ್ದ ಆರೋಪಿ, ಬಾಲಕಿಯನ್ನು ಅಡ್ಡಗಟ್ಟಿ ತನ್ನನ್ನು ಪ್ರೀತಿಸುವಂತೆ ಬಾಲಕಿಯನ್ನು ಹಿಡಿದು ಚುಂಬಿಸಿದ್ದ. ಆರೋಪಿ ವರ್ತನೆಯಿಂದ ಹೆದರಿದ ಬಾಲಕಿ ಸಹಾಯಕ್ಕಾಗಿ ಚೀರಿಕೊಂಡಾಗ ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದ. ಆರೋಪಿ ಬಾಲಕಿಗೆ ಚುಂಬಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬಾಲಕಿ ಮೇಲೆ ದೌರ್ಜನ್ಯ ಎಸಗಿದ 16ರ ಪೋರ್ನ್ ದಾಸ!
ಈ ಸಂಬಂಧ ಬಾಲಕಿ ತಾಯಿ ಪೀಣ್ಯ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ