ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. 9 ಮಕ್ಕಳನ್ನು ತುಂಬಿಕೊಂಡು ಹೋಗುತ್ತಿದ್ದ ಆಟೋ ರಿಕ್ಷಾಗೆ ಟ್ರಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ
ಚತ್ತೀಸಘಡ(ಫೆ.09): ಆಟೋ ರಿಕ್ಷಾ ಹಾಗೂ ಟ್ರಕ್ ನಡುವಿನ ಭೀಕರ ಅಪಘಾತಕ್ಕೆ 5 ವಿದ್ಯಾರ್ಥಿಗಳು ಬಲಿಯಾಗಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಚತ್ತೀಸಘಡದ ಕಾನ್ಕರ್ ಜಿಲ್ಲೆಯ ಕೋರಾರ್ ಗ್ರಾಮದಲ್ಲಿ ನಡೆದಿದೆ. ಒಟ್ಟು 9 ಶಾಲಾ ಮಕ್ಕಳನ್ನು ತುಂಬಿಕೊಂಡು ಶಾಲೆಯಿಂದ ಮನೆಗೆ ತೆರಳುತ್ತಿದ್ದ ಆಟೋ ರಿಕ್ಷಾಗೆ ಟ್ರಕ್ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಆಟೋ ರಿಕ್ಷಾ ಪ್ರಪಾತಕ್ಕೆ ಉರುಳಿದೆ. ಅಪಘಾತದಲ್ಲಿ ಐವರು ಶಾಲಾ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಚತ್ತೀಸಘಡ ಮುಖ್ಯಮಂತ್ರಿ ಭೂಪೇಶ್ ಭಾಘೆಲ್ ಆಘಾತ ಹಾಗೂ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಆಟೋರಿಕ್ಷಾ ಹಾಗೂ ಟ್ರಕ್ ನಡುವಿನ ಅಫಾಘಾತದಲ್ಲ ಐವರು ಶಾಲಾ ಮಕ್ಕಳು ಮೃತಪಟ್ಟಿರುವುದು ತೀವ್ರ ನೋವು ತಂದಿದೆ. ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳಿಗೆ ಸೂಕ್ತ ವೈದ್ಯಕೀಯ ನೆರವು ನೀಡಲಾಗುತ್ತಿದೆ. ಎಲ್ಲಾ ರೀತಿಯ ನರೆವು ನೀಡಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಇದೇ ವೇಳೆ ಮೃತಪಟ್ಟ ಮಕ್ಕಳ ಪೋಷಕರು ಹಾಗೂ ಸಂಬಂಧಿಕರಿಗೆ ಭಗವಂತ ದುಃಖವನ್ನು ಭರಿಸುವ ಶಕ್ತಿ ಕೊಡಲಿ ಎಂದು ಭೂಪೇಶ್ ಭಾಘೆಲ್ ಟ್ವೀಟ್ ಮಾಡಿದ್ದಾರೆ.
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ , ಗರ್ಭಿಣಿ ಸೇರಿ ಇಬ್ಬರೂ ಸಜೀವ ದಹನ
ಅಪಘಾತದ ಭೀಕರತೆ ಆಟೋ ರಿಕ್ಷಾ ನಜ್ಜು ಗುಜ್ಜಾಗಿದೆ. ಆಟೋ ಚಾಲಕ ಕೂಡ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭೀಕರ ಅಫಾಘಾತದ ಕುರಿತು ಪರಿಶೀಲನೆ ನಡೆಸಲಾಗಿದೆ. ಟ್ರಕ್ ಮಾಹಿತಿಗಳನ್ನು ಕಲೆ ಹಾಕಲಾಗಿದೆ. ರಸ್ತೆಯಲ್ಲಿ ಅಳವಡಿಸಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತೇವೆ. ಘಟನೆ ನೋವು ತಂದಿದೆ. ಗಾಯಗೊಂಡಿರುವ ಮಕ್ಕಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಇತ್ತ ಮೃತ ಪಟ್ಟ ಮಕ್ಕಳ ಪೋಷಕರಿಗೆ ದೇವರು ಧೈರ್ಯ ನೀಡಲಿ ಎಂದು ಬಸ್ತಾರ್ ಪೊಲೀಸ್ ಐಜಿ ಪಿ ಸುಂದರ್‌ರಾಜ್ ಹೇಳಿದ್ದಾರೆ.
ಸಂಜೆ 4.30ಕ್ಕೆ ಈ ಅಪಘಾತ ನಡೆದಿದೆ. ಅತೀ ವೇಗದಲ್ಲಿ ಬರುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ. ಮಕ್ಕಳನ್ನು ತಮ್ಮ ತಮ್ಮ ಮನೆಗೆ ಬಿಡಲು ಶಾಲೆಯಿಂದ ಹೊರಟ ಕೆಲವೇ ಹೊತ್ತಲ್ಲಿ ಈ ಅಪಘಾತ ಸಂಭವಿಸಿದೆ. ಇತ್ತ ಮೃತ ಮಕ್ಕಳ ಪೋಷಕರ ಅಳಲು ಮುಗಿಲು ಮುಟ್ಟಿದೆ. ಆಸ್ಪತ್ರೆ ದಾಖಲಿಸಿರುವ ಮಕ್ಕಳ ಪೋಷಕರು ಆಸ್ಪತ್ರೆ ದೌಡಾಯಿಸಿದ್ದಾರೆ. ಘಟನೆ ಬೆನ್ನಲ್ಲೇ ಸ್ಥಲೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇತ್ತ ಸ್ಥಳಕ್ಕೆ ಆಗಮಿಸಿದ ಪೊಲೀಸರ ಪರಿಶೀಲನೆ ನಡೆಸಿದ್ದಾರೆ.
Bengaluru: ಆನೇಕಲ್ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ಇಬ್ಬರು ಸಾವು
ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ
ಬೈಕ್‌ಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರರು ಬೈಕ್ ಮೇಲಿಂದ ಎಗರಿ ಬಿದ್ದಿರುವ ಘಟನೆ ಸೋಂಪುರ ಹೋಬಳಿಯ ಎಡೇಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರ ಬೆಂಗಳೂರು-ತುಮಕೂರು ರಸ್ತೆಯಲ್ಲಿ ನಡೆದಿದ್ದು ಅದೃಷ್ಟವಶಾತ್ ಇಬ್ಬರು ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದು, ಈ ಭೀಕರ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಯರಪ್ಪನಹಳ್ಳಿ ಗ್ರಾಮದ ನಿವಾಸಿಗಳಾದ ಸುರೇಶ್ (38) , ಅನುಸೂಯಮ್ಮ (42) ಗಾಯಾಳುಗಳು. ಇಬ್ಬರು ಬೈಕ್ ಸವಾರರು ನೆಲಮಂಗಲದಿಂದ ಸ್ವಗ್ರಾಮ ಯರಪ್ಪನಹಳ್ಳಿಗೆ ಹೋಗುತ್ತಿರುವಾಗ ಎಡೇಹಳ್ಳಿ ಗ್ರಾಮದ ಬಳಿ ಹಿಂದಿನಿಂದ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ತಕ್ಷಣ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಅನುಸೂಯಮ್ಮಗೆ ತಲೆಗೆ ಗಂಭೀರ ಗಾಯಗಳಾಗಿದ್ದು ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.