ಕಾಡಸಿದ್ದೇಶ್ವರ ಸ್ವಾಮೀಜಿ ಕಾರು ಅಪಘಾತ, ಮೂವರಿಗೆ ಗಾಯ

By Suvarna News  |  First Published Aug 9, 2022, 7:26 PM IST

ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಸ್ವಾಮೀಜಿ ಹಾಗೂ ಚಾಲಕ ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
 


ಬಾಗಲಕೋಟೆ, (ಆಗಸ್ಟ್.09): ಕಾಡಸಿದ್ದೇಶ್ವರ ಸ್ವಾಮೀಜಿ ಕಾರು ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲ್ಲೂಕಿನ ತೋಗುಣಸಿ ತಾಂಡಾದಲ್ಲಿ ನಡೆದಿದೆ. 

ಘಟನೆಯಲ್ಲಿ ಸ್ವಾಮೀಜಿ ಹಾಗೂ ಚಾಲಕ ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗುಳೇದಗುಡ್ಡ ಪಟ್ಟಣದ ಕಾಡಸಿದ್ದೇಶ್ವರ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀಲಗಿರಿ ಮರಕ್ಕೆ ಡಿಕ್ಕಿ  ಹೊಡೆದಿದೆ. 

Tap to resize

Latest Videos

undefined

Road Accident ಹುಬ್ಬಳ್ಳಿಯಲ್ಲಿ MLC ಬಸವರಾಜ ಹೊರಟ್ಟಿ ಕಾರು ಅಪಘಾತ

ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ವಾಮೀಜಿ ಹಾಗೂ ಚಾಲಕ ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ವಾಮೀಜಿ ಗುಳೇದಗುಡ್ಡ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಮಠಕ್ಕೆ ತೆರಳಿದ್ದಾರೆ.  ಸ್ವಾಮೀಜಿಗೆ ಯಾವುದೇ ಗಂಭೀರ ಸ್ವರೂಪದ ಗಾಯಗಳಾಗಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

click me!