ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತನ ಮೇಲೆ ತಂಡವೊಂದು ಕಟ್ಟಿಗೆಯಿಂದ ದಾಳಿ ನಡೆಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ.
ಮಂಗಳೂರು (ಮೇ.24): ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತನ ಮೇಲೆ ತಂಡವೊಂದು ಕಟ್ಟಿಗೆಯಿಂದ ದಾಳಿ ನಡೆಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಮಾಣಿಯ ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಳಿಕ ಕಾರಿನಿಂದ ಇಳಿದ ತಂಡ ಕಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ ಎಂದು ವಿಟ್ಲ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆ ನಡೆಸಿದವರು ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೋಸ ಹೋಗಬೇಡಿ, ಹಣ ಕೇಳಿ ನಿಮಗೂ ಬರಬಹುದು ಅವಧೂತ ವಿನಯ್ ಗುರೂಜಿ ಮೆಸೇಜ್!
ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಾಹಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಲ್ಲದೇ, ಇವರೆಲ್ಲರೂ ಮಾಣಿ ನಾಗು ಎಂಬಾತನ ಸಹಚರರು ಎಂದು ಕೂಡ ತಿಳಿಸಿದ್ದಾರೆ.
Bus Accident: ರಾಮದುರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ, 7 ಜನ ಆಸ್ಪತ್ರೆಗೆ ದಾಖಲು
ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಬಿಜೆಪಿ ಶಾಸಕರ ಗೆಲುವಿನ ಹರ್ಷಾಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆದಿರುವ ಅನುಮಾನ ವ್ಯಕ್ತವಾಗಿದೆ. ಗಾಯಗೊಂಡ ಯುವಕರು ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರ ತಂಡ ಭೇಟಿ ನೀಡಿ ತನಿಖೆ ಆರಂಭಿಸಿದೆ. ತನಿಖೆ ಬಳಿಕ ಹೆಚ್ಚಿನ ಮಾಹಿತಿ ಹೊರಬರಲಿದೆ.