
ತುಮಕೂರು(ಮಾ.08): ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷರಾಗಿದ್ದ ಬಾಲಮಂಜುನಾಥ್ ಸ್ವಾಮೀಜಿ ಅವರನ್ನ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಬಾಲಮಂಜುನಾಥ್ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಂಡು ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಾಲಮಂಜುನಾಥ್ ಸ್ವಾಮೀಜಿ ಬಂಧಿತ ಆರೋಪಿಯಾಗಿದ್ದಾರೆ.
ಅಭಿಷೇಕ್ ಕೊಟ್ಟ ಮಾಹಿತಿ ಮೇರೆಗೆ ತಡರಾತ್ರಿ ಮಠಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದರು. ಪರಿಶೀಲನೆ ವೇಳೆ ಸ್ವಾಮೀಜಿಯ ಅಸಲಿ ಮುಖವಾಡ ಬಯಲಾಗಿದೆ. ಹೀಗಾಗಿ ಬಾಲಮಂಜುನಾಥ್ ಸ್ವಾಮೀಜಿ ಹಾಗೂ ಆತನ ಆಪ್ತ ಸಹಾಯಕ ಅಭಿಲಾಷ್ ವಿರುದ್ಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಎಸ್‌ಪಿ ಅಶೋಕ್ ಕೆವಿ ನೇತೃತ್ವದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನ ಮುಂದುವರಿಸಿದ್ದಾರೆ.
ಅಪರಿಚಿತ ಮಹಿಳೆಗೆ 'ಹೇ ಡಾರ್ಲಿಂಗ್' ಅಂತೀರಾ? ಇದು ಲೈಂಗಿಕ ದೌರ್ಜನ್ಯ ಎಚ್ಚರ!
ಚರ್ಮ ರೋಗಕ್ಕೆ ಚಿಕಿತ್ಸೆ ಕೊಡುವ ನೆಪದಲ್ಲಿ ನನ್ನ ಬೆತ್ತಲೆ ವಿಡಿಯೋ ಮಾಡಿಕೊಂಡು, ನನ್ನನ್ನು ಬೆದರಿಸಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆಂದು ಸ್ವಾಮೀಜಿ ದೂರು ದಾಖಲಿಸಿದ್ದರು. ಕಳೆದ ಫೆಬ್ರುವರಿ 10 ರಂದು ತುಮಕೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸ್ವಾಮೀಜಿಯ ಆಪ್ತ ಸಹಾಯಕ ಅಭಿಲಾಷ್ ಎಂಬಾತನಿಂದ ಸ್ವಾಮೀಜಿ ಎಫ್ಐಆರ್ ದಾಖಲು ಮಾಡಿದ್ದರು.
ಸ್ವಾಮೀಜಿಯ ಸೇವಕ ಅಭಿಷೇಕ್ ಅಂಡ್ ಟೀಂ ನಿಂದ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್ ಇಡಲಾಗಿದೆ ಎಂದು ದೂರು ನೀಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿಂತೆ ಒಟ್ಟು 6 ಜನರ ಮೇಲೆ ದೂರು ನೀಡಲಾಗಿತ್ತು. ಈ ಪ್ರಕರಣ ಬೆನ್ನಲ್ಲೇ ಸ್ವಾಮೀಜಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಸ್ವಾಮೀಜಿ ಪೊಲೀಸರ ಅತಿಥಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ