
ಬಳ್ಳಾರಿ (ಆ.15): ಸ್ವಾತಂತ್ರ್ಯ ದಿನದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಬಳ್ಳಾರಿಯ ಮೋಕಾ ಪೊಲೀಸ್ ಠಾಣೆಯ ಪಿಎಸ್‌ಐ ಕಾಳಿಂಗ ಅವರ ಪತ್ನಿ ಚೈತ್ರಾ (36) ಮನೆಯಲ್ಲಿ ನೇಣುಬಿಗಿದು ಸಾವಿಗೆ ಶರಣಾದ ದಾರುಣ ಘಟನೆ ನಡೆದಿದೆ.
ಇಂದು ಬೆಳಗ್ಗೆ ಯಾರೂ ಇಲ್ಲದ ವೇಳೆ ದುಡುಕಿನ ನಿರ್ಧಾರ ತೆಗೆದುಕೊಂಡಿರುವ ಚೈತ್ರಾ. ತಮ್ಮ ಪತಿ ಕಾಳಿಂಗ ಹಾಗೂ ಮಕ್ಕಳನ್ನು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕಳುಹಿಸಿದ ಬಳಿಕ, ಮನೆಯಲ್ಲಿ ನೇಣುಬಿಗಿದುಕೊಂಡಿದ್ದಾರೆ. ಈ ಸಾವಿಗೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲವಾದರೂ, ಚೈತ್ರಾ ಇತ್ತೀಚಿಗೆ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ತವರು ಮನೆಗೆ ಹೋಗಿದ್ದ ಚೈತ್ರಾ ಎರಡು ದಿನಗಳ ಹಿಂದೆಯಷ್ಟೇ ಮರಳಿದ್ದರು ಎನ್ನಲಾಗಿದೆ.
ಆದರೆ ಇಂದು ಸ್ವಾತಂತ್ರ್ಯೋತ್ಸವ ದಿನದಂದೇ ಗಂಡ-ಮಕ್ಕಳನ್ನು ಕಾರ್ಯಕ್ರಮಕ್ಕೆ ಕಳಿಸಿ ಇತ್ತ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ. ಈ ಘಟನೆಯಿಂದ ಮಕ್ಕಳು, ಕುಟುಂಬಸ್ಥರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ