Ballari: ರಸ್ತೆ ಕಾಮಗಾರಿ ಗುಂಡಿಗೆ ಬೈಕ್ ಬಿದ್ದು ನರ್ಸ್ ಸಾವು: ಪತಿ ಗಂಭೀರ, ನಿರ್ಲಕ್ಷ್ಯ ಆರೋಪ

Published : Jun 04, 2026, 09:54 PM IST
Ballari Accident

ಸಾರಾಂಶ

ರಸ್ತೆ ಕಾಮಗಾರಿಗಾಗಿ ತೆಗೆಯಲಾಗಿದ್ದ ಗುಂಡಿಗೆ ಬೈಕ್‌ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಅವರ ಪತಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ..

ಬಳ್ಳಾರಿ (ಜೂ.04): ರಸ್ತೆ ಕಾಮಗಾರಿಗಾಗಿ ತೆಗೆಯಲಾಗಿದ್ದ ಗುಂಡಿಗೆ ಬೈಕ್‌ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಅವರ ಪತಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಚಾಣಕನೂರು ಕ್ರಾಸ್‌ ಸಮೀಪದ ರಾಜ್ಯ ಹೆದ್ದಾರಿ-63ರಲ್ಲಿ ನಡೆದಿದೆ.

ಮೃತರನ್ನು ಮಂಜುಳ (36) ಎಂದು ಗುರುತಿಸಲಾಗಿದ್ದು, ಅವರು ತಾಲೂಕಿನ ರಾವಿಹಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವರ ಪತಿ ಚಂದ್ರಶೇಖರ (46) ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ಜಿಲ್ಲಾ ವಿಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿಯ ಪ್ರಕಾರ, ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೇ, ಎಚ್ಚರಿಕೆ ಫಲಕಗಳು ಹಾಗೂ ಮಾರ್ಗಸೂಚಿ ಬೋರ್ಡ್‌ಗಳನ್ನು ಅಳವಡಿಸದಿರುವುದೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ರಾತ್ರಿ ವೇಳೆ ರಸ್ತೆ ಸ್ಪಷ್ಟವಾಗಿ ಕಾಣದ ಕಾರಣ ಬೈಕ್‌ ಸವಾರರು ಕಾಮಗಾರಿಗಾಗಿ ತೆಗೆಯಲಾಗಿದ್ದ ಗುಂಡಿಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ದಾಖಲು

ಘಟನೆಯ ಹಿನ್ನೆಲೆಯಲ್ಲಿ ಸ್ಥಳೀಯರು ಕಾಮಗಾರಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಲ್ಲೂ ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆಗೈದ ಹೆಂಡತಿ! ಪತಿ ನಾಪತ್ತೆಯ ದೂರಿನ ಹಿಂದಿತ್ತು ಮಹಾನಾಟಕ!
ಮಹಿಳೆಯರೇ ಎಚ್ಚರ: ಸರ್ಕಾರಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ; ಟಾಯ್ಲೆಟ್‌ನಲ್ಲಿ ಕ್ಯಾಮೆರಾ ಇಟ್ಟು ವಿಡಿಯೋ ರೆಕಾರ್ಡ್, ನೌಕರ ಅರೆಸ್ಟ್