ಬಳ್ಳಾರಿ: ಹೋಂ ವರ್ಕ್ ಮಾಡದ್ದಕ್ಕೆ ವಿದ್ಯಾರ್ಥಿ ಮೈ ಮೇಲೆ ಬಾಸುಂಡೆ ಬಾರಿಸಿದ ಶಿಕ್ಷಕಿ

Published : Nov 20, 2025, 12:18 PM IST
Ballari Teacher Beats Class 3 Boy for Missing Homework Parents Demand Action

ಸಾರಾಂಶ

ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರದ ರುದ್ರಮ್ಮ ಅಂಗ್ಲ ಮಾಧ್ಯಮ ಶಾಲೆಯಲ್ಲಿ, ಹೋಂ ವರ್ಕ್ ಮಾಡಿಲ್ಲವೆಂಬ ಕಾರಣಕ್ಕೆ 3ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕಿಯೊಬ್ಬರು ಮನಬಂದಂತೆ ಥಳಿಸಿದ್ದಾರೆ. ಇದರಿಂದ ವಿದ್ಯಾರ್ಥಿಯ ಮೈಮೇಲೆ ಬಾಸುಂಡೆ. ಆಕ್ರೋಶಗೊಂಡ ಪೋಷಕರು ಶಿಕ್ಷಕಿ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ..

ಬಳ್ಳಾರಿ (ನ.20): ಹೋಂ ವರ್ಕ್ ಮಾಡಿಲ್ಲವೆಂಬ ಕಾರಣಕ್ಕೆ 3ನೇ ತರಗತಿಯ ವಿದ್ಯಾರ್ಥಿಗೆ ಶಿಕ್ಷಕಿಯೊಬ್ಬರು ಮನಬಂದಂತೆ ಥಳಿಸಿದ ಆಘಾತಕಾರಿ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರದ ರುದ್ರಮ್ಮ ಅಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ.

ಬಾಲಕನ ಮೈಮೇಲೆ ಬಾಸುಂಡೆ:

ಅಕ್ಕಮಹಾದೇವಿ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕಿ. ಮೂರನೇ ತರಗತಿಯಲ್ಲಿ ಓದುತ್ತಿರುವ ಸೈಯದ್‌ ಎಂಬ ವಿದ್ಯಾರ್ಥಿಗೆ ಮನಸೋ ಇಚ್ಛೆ ಥಳಿಸಿದ್ದಾಳೆ. ಹೋಂವರ್ಕ್ ಮಾಡಿಕೊಂಡು ಬಾರದೇ ಇದ್ದಕ್ಕೆ ಕೋಪಗೊಂಡ ಶಿಕ್ಷಕಿ ಬಾಲಕನ ಕೈ-ಕಾಲು, ದೇಹದ ಎಲ್ಲೆಡೆ ಥಳಿಸಿದ್ದರಿಂದ ನೋವಿನಿಂದ ಬಳಲಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಶಿಕ್ಷಕಿಗೆ ಪೋಷಕರಿಂದ ತರಾಟೆ:

ಸೈಯದ್ ಮನೆಗೆ ಬಂದು ತಂದೆ-ತಾಯಿಗೆ ವಿಷಯ ತಿಳಿಸಿದ್ದಾನೆ. ಸಿಟ್ಟಿಗೆದ್ದ ಪೋಷಕರು ಶಾಲೆಗೆ ಧಾವಿಸಿ ಬಂದು ಶಿಕ್ಷಕಿ ಅಕ್ಕಮಹಾದೇವಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಶಿಕ್ಷಕಿ ವಿರುದ್ಧ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದೇ ರೀತಿ ಮತ್ತೊಮ್ಮೆ ನಡೆದರೆ ನೇರವಾಗಿ ಪೊಲೀಸ್ ಠಾಣೆ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದ್ದಾರೆ.ಈ ಘಟನೆಯಿಂದ ಪೋಷಕರಿಂದ ಆಕ್ರೋಶ ವ್ಯಕ್ತವಾಗಿದ್ದು, ಶಾಲಾ ಆಡಳಿತ ಮಂಡಳಿ ಶಿಕ್ಷಕಿ ವಿರದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!