Breaking ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ NIAಗೆ ಹಸ್ತಾಂತರ

By Ramesh BFirst Published Jul 29, 2022, 2:34 PM IST
Highlights

ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ಈ ಕೇಸ್‌ನ್ನು ಎನ್‌ಐಎ ಹಸ್ತಾಂತರಿಸಿದೆ.
 

ಬೆಂಗಳೂರು, (ಜುಲೈ..29): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಮೊನ್ನೇ ನಡೆದ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಇಂದು (ಶುಕ್ರವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಇಂದು(ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಪ್ರವೀಣ್ ಹತ್ಯೆ ಪ್ರಕರಣ NIA ಕೊಡಲು ತೀರ್ಮಾನ ಮಾಡಲಾಗಿದೆ. ಸುರತ್ಕಲ್ ನಲ್ಲಿ ನಡೆದ ಹತ್ಯೆ ಬಗ್ಗೆಯೂ ತೀವ್ರ ತೆನಿಖೆ ನಡೆಯಲಿದೆ . ಅಧಿಕ CCTV ಹಾಗೂ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಚೆಕ್ ಪೋಸ್ಟ್ ಬಳಿ ಕಟ್ಟೆಚರ ವಹಿಸಲು ಸೂಚಿಸಲಾಗಿದೆ. KSRP ಬೆಟಾಲಿಯನ್ ನಿಯೋಜನೆ ಮಾಡಲಾಗಿದೆ. ಅದರಲ್ಲೂ ಮುಖ್ಯವಾಗಿ ಕೇರಳ ಬಾರ್ಡರ್ ನಲ್ಲಿ ಕಟ್ಟೆಚರ‌‌‌ ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಮಟ್ಟದಲ್ಲಿ ಧಾರ್ಮಿಕ ಮುಖಂಡರ ಸಭೆ ಮಾಡುತ್ತೇವೆ.  ಸೆನ್ಸಿಟಿವ್ ಊರಿನಲ್ಲಿ ಟೆಂಪರ್ವರಿ ಪೊಲೀಸ್ ಕ್ಯಾಂಪ್ ಮಾಡಬೇಕು.ಚೆಕ್ ಪೋಸ್ಟ್ ಬಾರ್ಡರ್ ಗಳಲ್ಲಿ ಹಲವಾರು ಹುದ್ದೆ ಖಾಲಿ ಇರುವ ಹಿನ್ನೆಲೆಯಲ್ಲಿ ಹುದ್ದೆ ತುಂಬುವುದಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಪ್ರವೀಣ್ ಶವಯಾತ್ರೆ ವೇಳೆ ಲಾಠಿ ಚಾರ್ಜ್ ಮಾಡಿದ್ದ ಪೊಲೀಸರ ವರ್ಗಾವಣೆ

ಕೇರಳ ಬಾರ್ಡರ್‌ನಲ್ಲಿ ಸಿಸಿಟಿವಿ ಅಳವಡಿಸಿ,ಚೆಕ್ ಪೋಸ್ಟ್ ಹಾಕಿ ಸರ್ವೈಲನ್ಸ್ ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲೆಯ ಸೂಕ್ಷ್ಮ ಪ್ರದೇಶಗಳ್ಳಿ ಪೋಲಿಸ್ ಕ್ಯಾಂಪ್ ಮಾಡಲು ತಿಳಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ತಮ್ಮನ್ನು ದುರ್ಬಲ ಸಿಎಂ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಿದ್ದರಾಮಯ್ಯ ಹೇಳಿದ್ದೇಲ್ಲಾ ವೇದವಾಕ್ಯವಲ್ಲ ಎಂದು ತಿರುಗೇಟು ನೀಡಿದರು.

ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ ಎಂದರು.

 ಶಾಸಕ ತನ್ವೀರ್ ಸೇಠ್ ಮೇಲೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಯ ಸುಮಾರು 200 ಜನರನ್ನು ದಾಳಿ ನಡೆಸಿದ ಪ್ರಕರಣದಿಂದ ಅವರನ್ನು ಮುಕ್ತಗೊಳಿಸಲಾಗಿತ್ತು. ಅವರು ಈಗ ಪುನ: ಸಮಾಜಘಾತುಕ ಕೃತ್ಯಗಳನ್ನು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕೇವಲ ಹೇಳಿಕೆಗಳನ್ನು ನೀಡುತ್ತಾರೆ ಟೀಕಿಸಿದರು.

ಸರ್ಕಾರ  ಕ್ಷಿಪ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಜನರ ಮುಂದಿವೆ. ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳಿಗೆ ಫಂಡಿಂಗ್ ಮಾಡುತ್ತಿರುವುದೇ ಬಿಜೆಪಿ ಪಕ್ಷ ಎಂಬುದು ಅತ್ಯಂತ ಹಾಸ್ಯಾಸ್ಪದವಾದ ಹೇಳಿಕೆ. ಇದು ಕಾಂಗ್ರೆಸ್ಸಿನ ರಾಜಕೀಯ ದಿವಾಳಿತನವನ್ನು ಬಿಂಬಿಸುತ್ತದೆ. ಸರ್ಕಾರದಲ್ಲಿ ಯಾರೂ ರಾಜಿನಾಮೆ ಕೊಡುವ ಅಗತ್ಯವಿಲ್ಲ. ಇಂತಹ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಿಲ್ಲ. ಗಟ್ಟಿಯಾಗಿ ನಿಂತು ಕಠಿಣ ನಿಲುವುಗಳನ್ನು ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ ಹೇಳಿದರು.

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರ್‌ ಹತ್ಯೆ ಪೂರ್ವಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ನಾವು ಇದನ್ನು ಕೊಲೆ ಪ್ರಕರಣವಾಗಿ ನೋಡುತ್ತಿಲ್ಲ. ದೇಶವನ್ನು ಛಿದ್ರ ಮಾಡುವ ಯೋಜನಾಬದ್ಧ ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಿದ್ದೇವೆ. ಅಗತ್ಯಬಿದ್ದರೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಇದೀಗ ಅಧಿಕೃತವಾಗಿ ತಿಳಿಸಿದ್ದಾರೆ.

ಈಗಾಗಲೇ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಇಪ್ಪತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

click me!