
ಬೆಂಗಳೂರು(ಸೆ.14): ಬಿಬಿಎಂಪಿ ಆವರಣದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ಕ್ಯಾಂಟೀನ್ ಮಾಲೀಕ ನಷ್ಟ ಅನುಭವಿಸಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜರಾಜೇಶ್ವರಿ ನಗರದ ಬೈಲಸಂದ್ರದ ನಿವಾಸಿ ಲಿಂಗರಾಜು ಆತ್ಮಹತ್ಯೆ ಮಾಡಿಕೊಂಡವರು. ಲಿಂಗರಾಜು ಸುಮಾರು 23 ವರ್ಷಗಳಿಂದ ಬಿಬಿಎಂಪಿ ಆವರಣದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಲಾಕ್‌ಡೌನ್‌ನಿಂದಾಗಿ ಕ್ಯಾಂಟೀನ್ ಮುಚ್ಚಿದ್ದ ಲಿಂಗರಾಜು ಸಾಕಷ್ಟುಅನುಭವಿಸಿದ್ದರು. ಅಲ್ಲದೆ, ಪಾಲಿಕೆ ಅಂಗಳದಲ್ಲಿ ಐಡಿಸಿ ಕ್ಯಾಂಟೀನ್‌ಗೆ ಅವಕಾಶ ಮಾಡಿಕೊಡಲಾಗಿತ್ತು. ಹೋಟೆಲ್, ಮೊಬೈಲ್ ಯುನಿಟ್ ಪಾಲಿಕೆ ಆವರಣಕ್ಕೆ ಬಂದಿತ್ತು. ಇದರಿಂದ ಕೂಡ ನಷ್ಟ ಅನುಭವಿಸಿದ್ದರು. ಹಲವರ ಬಳಿ ಲಿಂಗರಾಜು ಸಾಲ ಪಡೆದಿದ್ದರು. ಇದೆಲ್ಲದರಿಂದ ಲಿಂಗರಾಜು ಒತ್ತಡಕ್ಕೆ ಒಳಗಾಗಿದ್ದರು. ಶನಿವಾರ ರಾತ್ರಿ ಎಂದಿನಂತೆ ಊಟ ಮಾಡಿ ಕೊಠಡಿಗೆ ತೆರಳಿದ್ದ, ಲಿಂಗರಾಜು ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೋಲಾರ; 5 ವರ್ಷದ ಮಗಳ ಕೊಂದು ನೇಣಿಗೆ ಶರಣಾದ ಅರ್ಚಕರ ಪತ್ನಿ
ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿಲ್ಲ. ಕ್ಯಾಂಟೀನ್ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಕುಟುಂಬಸ್ಥರ ಹೇಳಿಕೆಯಿಂದ ತಿಳಿದು ಬಂದಿದೆ. ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ