ಬಿಬಿಎಂಪಿ ಕಸದ ಲಾರಿಗೆ ವಾಹನ ಡಿಕ್ಕಿ; 14 ವರ್ಷದ ಬಾಲಕಿ ದುರ್ಮರಣ!

By Kannadaprabha News  |  First Published Jan 29, 2024, 12:38 PM IST

ಬಿಬಿಎಂಪಿ ಕಸದ ಟ್ರಕ್‌ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ  ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಸೀದಿ ರಸ್ತೆ ಬಳಿ ನಡೆದಿದೆ.


ಬೆಂಗಳೂರು (ಜ.29):  ಬಿಬಿಎಂಪಿ ಕಸದ ಟ್ರಕ್‌ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ  ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಸೀದಿ ರಸ್ತೆ ಬಳಿ ನಡೆದಿದೆ.

ಈಕೆ ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದಳು. ಸಂಜೆ ಅಂತ್ಯಕ್ರಿಯೆ ನಡೆಯಿತು. ಪುಲಕೇಶಿನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tap to resize

Latest Videos

ಇದೇ ವೇಳೆ ನಗರದಲ್ಲಿ ಶನಿವಾರ ಮತ್ತೆ ಮೂರು ರಸ್ತೆ ಅಪಘಾತಗಳು ವರದಿಯಾಗಿವೆ. ಒಂದು ಘಟನೆಯಲ್ಲಿ, 35 ವರ್ಷದ ಇಶಾಕ್ ಮಾಂಜಿ ಅವರು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ  ಸಾವನ್ನಪ್ಪಿದ್ದಾರೆ. ಹೆಣ್ಣೂರು ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ 11.15ರ ಸುಮಾರಿಗೆ ಘಟನೆ ನಡೆದಿದೆ.

ಬಾಗಲಕೋಟೆ: ಶಾಲಾ ವಾಹನ ಭೀಕರ ಅಪಘಾತ ನಾಲ್ವರು ಮಕ್ಕಳು ದುರ್ಮರಣ!

ಜೆ.ಪಿ.ನಗರದ ನಿವಾಸಿ ಅರುಣ್ ನೈಸ್ ರಸ್ತೆ ಸೇತುವೆಯಿಂದ ಅಂಜನಾಪುರ ರಸ್ತೆ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಬಿಹಾರದ 32 ವರ್ಷದ ಸುಜಿತ್ ಶಾ ಅವರ ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ. ಮೃತರು ಕೂಲಿ ಕೆಲಸ ಮಾಡಿಕೊಂಡು ಚಿಕ್ಕನಾಗಮಂಗಲದಲ್ಲಿ ವಾಸವಾಗಿದ್ದರು.

ವೀಕೆಂಡ್ ಟ್ರಿಪ್‌ನಿಂದ ಮರಳುತ್ತಿದ್ದ ವೇಳೆ ನಿದ್ದೆಗೆ ಜಾರಿದ ಚಾಲಕ, ಭೀಕರ ಅಪಘಾತದಲ್ಲಿ 6 ಮಂದಿ ಸಾವು!

click me!