ಬೆಂಗಳೂರಲ್ಲಿ ಬಿಬಿಎಂಪಿ ಟಿಪ್ಪರ್ ಲಾರಿಗೆ ಮತ್ತೊಂದು ಬಲಿ: ಅಪಘಾತದಲ್ಲಿ ಮಹಿಳೆ ಸಾವು

Published : Jul 09, 2022, 10:01 PM ISTUpdated : Jul 09, 2022, 10:11 PM IST
ಬೆಂಗಳೂರಲ್ಲಿ ಬಿಬಿಎಂಪಿ ಟಿಪ್ಪರ್ ಲಾರಿಗೆ ಮತ್ತೊಂದು ಬಲಿ: ಅಪಘಾತದಲ್ಲಿ ಮಹಿಳೆ ಸಾವು

ಸಾರಾಂಶ

Bengaluru Accident News: ನಾಗರಭಾವಿ ರಸ್ತೆಯಲಿ ದ್ವಿಚಕ್ರ ವಾಹನದಲ್ಲಿ ಪತ್ನಿ ವಿಜಕಲಾ ಜೊತೆ ಪತಿ ಯೋಗೇಂದ್ರ ಹೋಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ

ಬೆಂಗಳೂರು (ಜು. 09): ಬೆಂಗಳೂರಿನಲ್ಲಿ ಬಿಬಿಎಂಪಿ (BBMP) ಟಿಪ್ಪರ್ ಲಾರಿಗೆ ಮಹಿಳೆ ಬಲಿಯಾಗಿದ್ದಾರೆ.  ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ 9.50ರ ಸುಮಾರಿಗೆ ಘಟನೆ ನಡೆದಿದೆ.  ನಾಗರಭಾವಿ ರಸ್ತೆಯಲಿ (Nagarabavi) ದ್ವಿಚಕ್ರ ವಾಹನದಲ್ಲಿ ಪತ್ನಿ ವಿಜಕಲಾ ಜೊತೆ ಪತಿ ಯೋಗೇಂದ್ರ ಹೋಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಹೀಗಾಗಿ ಬೈಕ್ ಹಿಂಬದಿ ಕುಳಿತಿದ್ದ ವಿಜಯಕಲಾಗೆ ಗಂಭೀರ ಗಾಯಗಳಾಗಿದ್ದು.  ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಗದೆ ಮಹಿಳೆ ಸಾವನ್ನಪ್ಪಿದ್ದಾರೆ. 

ಮಧ್ಯಾಹ್ನ‌12.30ರ ಸುಮಾರಿಗೆ ಮಹಿಳೆ ಸಾವನಪ್ಪಿದ್ದು,  ಬೈಕ್ ಸವಾರ ಯೋಗೆಂದ್ರಗೂ ಗಾಯಗಳಾಗಿವೆ. ಯೋಗೆಂದ್ರ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಮೂವರ ದುರ್ಮರಣ

ಬಿಬಿಎಂಪಿ ಕಸದ ಲಾರಿಗೆ  ಫುಡ್‌ ಡೆಲಿವರಿ ಬಾಯ್‌ ಬಲಿ:  ನಾಗವಾರ-ಥಣಿಸಂದ್ರ ಮುಖ್ಯರಸ್ತೆಯಲ್ಲಿ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿತ್ತು. ಕೊತ್ತನೂರು ನಿವಾಸಿ ದೇವಣ್ಣ (25) ಮೃತ ಸವಾರ. ಸಂಜೆ 4.30ರ ಸುಮಾರಿಗೆ ಗ್ರಾಹಕರಿಗೆ ಫುಡ್‌ ಡೆಲಿವರಿ(Food Delivery) ನೀಡಲು ದ್ವಿಚಕ್ರ ವಾಹನದಲ್ಲಿ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧ ಬಿಬಿಎಂಪಿ ಕಸದ ಲಾರಿ ಚಾಲಕ ದಿನೇಶ್‌ ನಾಯಕ್‌(40)ನನ್ನು ಬಂಧಿಸಲಾಗಿದೆ. 

ದಾವಣಗೆರೆ ಮೂಲದ ದಿನೇಶ್‌ ಕೊತ್ತನೂರಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಫುಡ್‌ ಡೆಲಿವರಿ ಕೆಲಸ ಮಾಡಿಕೊಂಡು ಜೀವನ ದೂಡುತ್ತಿದ್ದರು. ಶನಿವಾರ ಸಂಜೆ ಫುಡ್‌ ಡೆಲಿವರಿ ನೀಡಲು ಹೋಗುವಾಗ ನಾಗವಾರ-ಥಣಿಸಂದ್ರ ಮುಖ್ಯರಸ್ತೆಯಲ್ಲಿ ಹಿಂದಿನಿಂದ ವೇಗವಾಗಿ ಬಂದಿರುವ ಬಿಬಿಎಂಪಿ ಕಸದ ಲಾರಿ, ಏಕಾಏಕಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ದಿನೇಶ್‌ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಕಸದ ಲಾರಿಚಕ್ರ ತಲೆಯ ಮೇಲೆಯೇ ಹರಿದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಬಿಬಿಎಂಪಿ ಕಸದ ಲಾರಿಯನ್ನು ಜಪ್ತಿ ಮಾಡಿ ಚಾಲಕನ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಾ.21ರಂದು ಹೆಬ್ಬಾಳ ಬಳಿ ರಸ್ತೆ ದಾಟುವಾಗ 15 ವರ್ಷದ ಅಕ್ಷಯಾಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಸೊಂಟದ ಮೇಲೆ ಲಾರಿ ಚಕ್ರ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಳು.
  • ಮಾ.31ರಂದು ಥಣಿಸಂದ್ರ ಮುಖ್ಯರಸ್ತೆಯಲ್ಲಿ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಯಲಹಂಕ ನಿವಾಸಿ ರಾಮಯ್ಯ(60) ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು.
  • ಏ.18ರಂದು ನಾಯಂಡಹಳ್ಳಿ ರಿಂಗ್‌ ರಸ್ತೆಯಲ್ಲಿ ನಾಗರಬಾವಿ ಕಡೆಯಿಂದ ನಾಯಂಡಹಳ್ಳಿ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಎಸ್‌ಬಿಐ ಬ್ಯಾಂಕ್‌ ಅಧಿಕಾರಿ ಪದ್ಮಿನಿ(40) ಸ್ಥಳದಲ್ಲೇ ಮೃತಪಟ್ಟಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!