
ಬೆಂಗಳೂರು(ಮೇ 16) ಕೊರೊನಾ ನಡುವೆಯೂ ಸೈಬರ್ ಖದೀಮರು ಕಳ್ಳಾಟ ಮುಂದುವರಿಸಿದ್ದಾರೆ. ರೆಮಿಡಿಸಿವಿಯರ್ ಇಂಜೆಕ್ಷನ್ ಕೊರತೆಯನ್ನೇ ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಿದ್ದು ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು.
ವಾಟ್ಸ್ ಅಪ್ ಮೂಲಕ ರೆಮಿಡಿಸಿವಿಯರ್ ಅವಶ್ಯಕತೆ ಇರುವವರ ನಂಬರ್ ಗಳಿಗೆ ಇಂಜೆಕ್ಷನ್ ಇರುವುದಾಗಿ ಮೇಸೆಜ್ ಕಳಿಸುತ್ತಾರೆ. ಅಡ್ವಾನ್ಸ್ ಹಣ ನೀಡಿದ್ರೆ ಇಂಜೆಕ್ಷನ್ ಕೊಡುವುದಾಗಿ ಮೇಸೆಜ್ ಮಾಡಿ ನಂತರ ಹಣ ಪಡೆದುಕೊಂಡು ವಂಚನೆ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.
ರೆಮಿಡಿಸಿವಿಯರ್ ದಂಧೆಯಲ್ಲಿ ಸಿಕ್ಕಿಬಿದ್ದ ಶಾಸಕರ ಸಂಬಂಧಿ
ಹಣ ಹಾಕಿ ವಂಚನೆಗೊಳಗಾದರು ಬೆಂಗಳೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಸೈಬರ್ ಖದೀಮರ ಬಲೆಗೆ ಬಿದ್ದು ಹಣ ಕಳೆದುಕೊಂಡವರು ದೂರು ನೀಡಿದ್ದು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಇಂಥ ಸಂದೇಶಗಳ ಬಗ್ಗೆ ಎಚ್ಚರಿಕೆಯಿಂದ ಇರಿ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ