ಹಣ ವಾಪಸ್ ನೀಡದ್ದಕ್ಕೆ ಮಕ್ಕಳ ಅಪಹರಣ; ಅಥಣಿ ಪೊಲೀಸರಿಂದ ಇಬ್ಬರ ಮಕ್ಕಳ ರಕ್ಷಣೆ

By Ravi Janekal  |  First Published Oct 25, 2024, 9:46 AM IST

ಮಕ್ಕಳ ಕಳ್ಳರ ಮೇಲೆ ಫೈರಿಂಗ್ ಮಾಡಿ ಅಥಣಿ ಪೊಲೀಸರು ಇಬ್ಬರೂ ಬಾಲಕರನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.


ಚಿಕ್ಕೋಡಿ (ಅ.25): ಮಕ್ಕಳ ಕಳ್ಳರ ಮೇಲೆ ಫೈರಿಂಗ್ ಮಾಡಿ ಅಥಣಿ ಪೊಲೀಸರು ಇಬ್ಬರೂ ಬಾಲಕರನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು.  ನಿನ್ನೆ ಗುರುವಾರ ದಿನದಂದು ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟದ ಬಡಾವಣೆಯ ವಿಜಯ್ ದೇಸಾಯಿ ಎಂಬುವರ ಮನೆಗೆ ಹೊಕ್ಕು ಅವರ ಇಬ್ಬರು ಮಕ್ಕಳಾದ ಸ್ವಸ್ತಿ ವಿಜಯ್ ದೇಸಾಯಿ (4)  ಮತ್ತು ವಿಯೋಮ್ ವಿಜಯ ದೇಸಾಯಿ (3) ದುಷ್ಕರ್ಮಿಗಳು ಅಪಹರಿಸಿದ್ದರು. ಮಕ್ಕಳು ಅಪಹರಣಕ್ಕೊಳದ ಬಗ್ಗೆ ಪೊಲೀಸರಿಗೆ ದೂರು ನೀಡುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಅಥಣಿ ಪೊಲೀಸರು. ಮೂರು ತಂಡಗಳನ್ನು ಮಾಡಿಕೊಂಡು ಹುಡುಕಾಟ ನಡೆಸಿದ್ದರು.

Latest Videos

undefined

ಮೊಬೈಲ್​ನಲ್ಲಿ ಅವನದ್ದೇ ರಾಸಲೀಲೆ ವಿಡಿಯೋಗಳು! ಗೆಳೆಯರ ಜೊತೆ ಸೇರಿ ಗಂಡನನ್ನೇ ಕೊಂದುಬಿಟ್ಟಳಾ ಮಡದಿ?

ಮಹಾರಾಷ್ಟ್ರ ಗಡಿಯಾದ ಕೋಹಳ್ಳಿ ಸಿಂಧೂರ್ ಮಾರ್ಗ ಮಧ್ಯದಲ್ಲಿ ಮಕ್ಕಳ ಕಳ್ಳರನ್ನು ಪೊಲೀಸರು ತಡೆಗಟ್ಟಿದಾಗ ದುಷ್ಕರ್ಮಿಗಳು ಪೊಲೀಸರ ಮೇಲೆ ಅಲ್ಲೆಗೆ ಮುಂದಾಗುತ್ತಿದ್ದಂತೆ ಪೊಲೀಸರು  ಆತ್ಮರಕ್ಷಣೆಗೆ ದುಷ್ಕರ್ಮಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಮೂವರು ಆರೋಪಿಗಳ ಪೈಕಿ ಓರ್ವ ಆರೋಪಿಗೆ ಎಡಗಾಲಿಗೆ ಗುಂಡೇಟು ನೀಡಿದ್ದಾರೆ. ಗುಂಡೇಟು ತಿಂದ ಆರೋಪಿ ಕೊಲ್ಲಾಪುರ ಜಿಲ್ಲೆ ಹಾತ್ ಕನಗಲಾ ಗ್ರಾಮದ ಸಂಬಾಜಿ ರಾವಸಾಬ ಕಾಂಬಳೆ ಎಂದು ಗುರುತಿಸಲಾಗಿದೆ.  ಗಾಯಾಳು ಆರೋಪಿಯನ್ನು ಸ್ಥಳೀಯ ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಎಂದು ಬೆಳಗಾವಿ ಎಸ್ ಪಿ ಭೀಮಶಂಕರ್ ಗುಳೆದ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 

ಚಿಕ್ಕೋಡಿ: ವಸತಿ ಶಾಲೆಯ ಮಹಡಿಯಿಂದ ಬಿದ್ದು ಪಿಯು ವಿದ್ಯಾರ್ಥಿನಿ ಸಾವು, ಕಾರಣ?

ತಂದೆಯ ಹಣಕಾಸಿನ‌ ವ್ಯವಹಾರದ ಕಾರಣ ಮಕ್ಕಳನ್ನ ಕಿಡ್ನ್ಯಾಪ್ ಮಾಡಲಾಗಿತ್ತು. ಹಣ ವಾಪಸ್ ನೀಡದೇ ಇರುವದಕ್ಕೆ ಕಿಡ್ನ್ಯಾಪ್ ಮಾಡಿಸಲಾಗಿದೆ. ಈ ಮೂವರು ಸುಪಾರಿ ಪಡೆದು ಕಿಡ್ನ್ಯಾಪ್ ಮಾಡಿದ್ದು ಇನ್ನೂ ಮೂಲ ಆರೋಪಿಗಳ ಹೆಸರು ತನಿಖೆಯಿಂದ ಹೊರಬರಬೇಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಕಾರ್ಯಾಚರಣೆಯಲ್ಲಿ ಅಥಣಿ ಪಿ ಎಸ್ ಆಯ್ ಮಹಾಲಿಂಗ ಉಪ್ಪಾರ ಇಬ್ಬರು ಪೇದಗಳಾದ ಜಮೀರ್ ಡಾಂಗೆ ಹಾಗೂ ರಮೇಶ್ ಹಾದಿಮನಿ  ಗಾಯಗಳಾಗಿದ್ದು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲ ಮಾಡಿ ಅವರಿಗೂ ಕೂಡ ಚಿಕಿತ್ಸೆ ಮುಂದುವರೆದಿದೆ, ಇಬ್ಬರು ಮಕ್ಕಳು ಸುರಕ್ಷಿತವಾಗಿ ತಾಯಿ ಮಡಿಲು ಸೇರಿಸಿದ ಅಥಣಿ ಪೊಲೀಸರಿಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

click me!