ಬೆಳಗಾವಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿನಿ ಮೇಲೆ ಸಾಂಗ್ಲಿಯಲ್ಲಿ ಗ್ಯಾಂಗ್‌ರೇಪ್‌

Kannadaprabha News   | Kannada Prabha
Published : May 24, 2025, 09:42 AM ISTUpdated : May 24, 2025, 09:45 AM IST
Maharashtra MBBS student gangrape

ಸಾರಾಂಶ

ಬೆಳಗಾವಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿನಿ ಮೇಲೆ ಸ್ನೇಹಿತರೇ ಸಾಮೂಹಿಕ ಬಲತ್ಕಾರವೆಸಗಿದ ಆಘಾತಕಾರಿ ಘಟನೆಯು ಮೇ 18ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಮುಂಬೈ (ಮೇ.24): ಬೆಳಗಾವಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿನಿ ಮೇಲೆ ಸ್ನೇಹಿತರೇ ಸಾಮೂಹಿಕ ಬಲತ್ಕಾರವೆಸಗಿದ ಆಘಾತಕಾರಿ ಘಟನೆಯು ಮೇ 18ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗಳನ್ನು ಮೇ 27ರವರೆಗೆ ಪೊಲೀಸ್‌ ಕಸ್ಟಡಿಗೆ ಆದೇಶಿಸಿದೆ.

ಅಗಿದ್ದೇನು?: ಮೇ 18ರಂದು ಘಟನೆ ನಡೆದಿದೆ. ಅಂದು 3 ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿನಿ ತನ್ನ ಸ್ನೇಹಿತರೊಂದಿಗೆ ರಾತ್ರಿ 10 ಗಂಟೆಗೆ ಸಿನಿಮಾ ವೀಕ್ಷಿಸಲು ನಿರ್ಧರಿಸಿದ್ದಳು. ಅದಕ್ಕೂ ಮುನ್ನ ತನ್ನ ಸ್ನೇಹಿತರ ಅಪಾರ್ಟ್‌ಮೆಂಟ್‌ಗೆ ತೆರಳಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಸ್ನೇಹಿತರು, ಸಂತ್ರಸ್ತೆಗೆ ಮತ್ತು ಬರಿಸುವ ಮಿಶ್ರಣ ಬೆರೆಸಿ ಪಾನೀಯ ನೀಡಿದರು. ಆಗ ಆಕೆ ಪ್ರಜ್ಞೆ ತಪ್ಪಿದ್ದಾರೆ. ಇದನ್ನೇ ಉಪಯೋಗಿಸಿಕೊಂಡ ಸ್ನೇಹಿತರು ಆಕೆಯ ಮೇಲೆ ಬಲತ್ಕಾರ ವೆಸಗಿದ್ದಾರೆ.

ಜೊತೆಗೆ ಬಹಿರಂಗಪಡಿಸಿದರೆ, ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಒಡ್ಡಿದ್ದಾರೆ. ಬಳಿಕ ಸಂತ್ರಸ್ತೆಯು ಬೆಳಗಾವಿಯಲ್ಲಿದ್ದ ತನ್ನ ಪೋಷಕರಿಗೆ ಘಟನೆಯನ್ನು ವಿವರಿಸಿದ್ದಾರೆ. ಕೂಡಲೇ ಪೋಷಕರು ದೂರು ದಾಖಲಿಸಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಪ್ರಕರಣ ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಕಿಂಗ್: ರಾತ್ರಿಯಾದ್ರೆ ಬೆಡ್‌ರೂಂ ಬಳಿ ಬರ್ತಾನೆ ಸೈಕೋ! ಅಪರಿಚಿತನ ಕಾಟಕ್ಕೆ ಬೇಸತ್ತ ವೈದ್ಯೆ!
ಮಾಟ ಮಂತ್ರ ಪರಿಹಾರದ ನಾಟಕ: ಮಲ್ಲೇಶ್ವರಂನಲ್ಲಿ ಚಿನ್ನಾಭರಣ ದೋಚಿದ ನಕಲಿ ಸ್ವಾಮಿಗಳು!