ಬೆಳಗಾವಿ: ರಾಯಲ್ ಸೀಮೆ ಸಿನಿಮಾ ಸ್ಟೈಲ್‌ನಲ್ಲಿ ಭಯಾನಕ ಹೊಡೆದಾಟ: ಜೆಡಿಎಸ್ ಮುಖಂಡನ ಪುತ್ರನ ಮೇಲೆ ಎಫ್ಐಆರ್!

Published : Oct 13, 2025, 09:29 AM IST
JDS leader son attacks family

ಸಾರಾಂಶ

JDS leader son attacks family ಬೆಳಗಾವಿಯ ಇಟ್ನಾಳ ಗ್ರಾಮದಲ್ಲಿ ಜಮೀನು ವಿವಾದ, ಜೆಡಿಎಸ್ ಮುಖಂಡ ಪ್ರತಾಪರಾವ್ ಪಾಟೀಲ್ ಅವರ ಪುತ್ರ ಶಿವರಾಜ್ ಪಾಟೀಲ್ ನೇತೃತ್ವದ ಗುಂಪು ಡಾಂಗೆ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ. ಮಹಿಳೆ, ವೃದ್ಧರಿಗೆ ಗಂಭೀರ ಗಾಯ. 35ಕ್ಕೂ  ಜನರ ವಿರುದ್ಧ ಎಫ್ಐಆರ್.

ಬೆಳಗಾವಿ, (ಅ.13) ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಇಟ್ನಾಳ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪರಾವ್ ಪಾಟೀಲ್ ಅವರ ಪುತ್ರ ಶಿವರಾಜ್ ಪಾಟೀಲ್ ಸೇರಿದಂತೆ 35ಕ್ಕೂ ಹೆಚ್ಚು ಜನರ ವಿರುದ್ಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಘಟನೆಯ ಭಯಾನಕ ದೃಶ್ಯಗಳು ರಾಯಲ್ ಸೀಮೆಯ ಸಿನಿಮಾ ಸ್ಟೈಲ್‌ನಂತೆ ನೆನಪಿಸುವಂತಿವೆ .

ಘಟನೆ ವಿವರ:

ಅಕ್ಟೋಬರ್ 06 ರಂದು ಇಟ್ನಾಳ ಗ್ರಾಮದ ಸರ್ವೇ ನಂಬರ್ 43/6 ಮತ್ತು 202/2 ಜಮೀನು ಕಬ್ಜೆಗೆ ಸಂಬಂಧಿಸಿದ ವಿವಾದದಿಂದ ಈ ಘಟನೆ ಆರಂಭವಾಗಿದೆ. ಶಿವರಾಜ್ ಪಾಟೀಲ್ ನೇತೃತ್ವದ ಗುಂಪು ಟ್ರಾಕ್ಟರ್ ಮತ್ತು ಕ್ರೂಸರ್‌ಗಳಲ್ಲಿ ಬಂದು, ಬಡಿಗೆ, ಕೋಲುಗಳು ಹಾಗೂ ಮಾರಕಾಸ್ತ್ರಗಳೊಂದಿಗೆ ಡಾಂಗೆ ಕುಟುಂಬದ ಮೇಲೆ ದಾಳಿ ಮಾಡಿದ ಆರೋಪವಿದೆ. ಈ ದಾಳಿಯಲ್ಲಿ ವಿವಾಹಿತ ಮಹಿಳೆ ಅಶ್ವಿನಿ ಸದಾಶಿವ ಡಾಂಗೆ ಮತ್ತು ವೃದ್ಧ ರಾಮಪ್ಪ ಡಾಂಗೆ ಅವರಿಗೆ ಗಂಭೀರ ಗಾಯಗಳಾಗಿವೆ. ಅಶ್ವಿನಿಯವರ ಎರಡು ಕೈ ಮತ್ತು ಒಂದು ಕಾಲಿನ ಮೂಳೆ ಮುರಿತವಾಗಿದ್ದು, ರಾಮಪ್ಪನವರ ಎರಡೂ ಕಾಲುಗಳ ಮೂಳೆಗಳು ಮುರಿದಿವೆ. ಗಾಯಾಳುಗಳು ಪ್ರಸ್ತುತ ಗೋಕಾಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೊಬೈಲ್‌ನಲ್ಲಿ ಸೆರೆಯಾದ ದೃಶ್ಯ:

ಕಲ್ಲು ತೂರಾಟ, ಬಡಿಗೆ, ಕೋಲುಗಳೊಂದಿಗೆ ಓಡಾಡುವ ಭಯಾನಕ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿವೆ. ಈ ದೃಶ್ಯಗಳು ಸಿನಿಮಾದಲ್ಲಿನ ಹೊಡೆದಾಟದ ದೃಶ್ಯಗಳನ್ನೇ ಮೀರಿಸುವಂತಿವೆ

ಪೊಲೀಸರ ಮೇಲೆ ಆರೋಪ:

ಘಟನೆ ನಡೆದ ದಿನ ದೂರು ನೀಡಲು ಹೋದಾಗ ಹಾರೂಗೇರಿ ಪೊಲೀಸರು ಕೇಸ್ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ನೊಂದ ಕುಟುಂಬ ಆರೋಪಿಸಿದೆ. ಆದರೆ, ಸಿಎಂ ಸಿದ್ದರಾಮಯ್ಯನವರ ಭೇಟಿಯ ನಂತರ ಮತ್ತು ಅವರೇ ಸ್ವತಃ ಫೋನ್ ಮಾಡಿದ ಬಳಿಕವಷ್ಟೇ ಅಕ್ಟೋಬರ್ 07 ರಂದು ಎಫ್ಐಆರ್ ದಾಖಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಎಫ್ಐಆರ್ ವಿವರ:

ಶಿವರಾಜ್ ಪಾಟೀಲ್ ಎ1 ಆರೋಪಿಯಾಗಿದ್ದು, ಲಕ್ಷ್ಮಣ ಹೊನ್ನಳ್ಳಿ ಕುಟುಂಬದ ಸದಸ್ಯರು ಸೇರಿದಂತೆ 35ಕ್ಕೂ ಹೆಚ್ಚು ಜನರ ವಿರುದ್ಧ ದೂರು ದಾಖಲಾಗಿದೆ. ಆದರೆ, ಕೇವಲ ಇಬ್ಬರು ಆರೋಪಿಗಳನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿಗಳ ಬಂಧನಕ್ಕೆ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪವಿದೆ. ಈ ಘಟನೆಯಿಂದ ಇಟ್ನಾಳ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ
ಚಿಕ್ಕಮಗಳೂರು: ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!