ರಜೆಗೆ ಬಂದಿದ್ದ ಯೋಧನನ್ನ ಕೊಂದಿದ್ದ ಪಾಪಿ ತಂದೆಗೆ ಜೀವಾವಧಿ ಶಿಕ್ಷೆ

By Ramesh BFirst Published Nov 11, 2020, 9:47 PM IST
Highlights

ಹೆತ್ತ ಮಗನನ್ನೇ ಗುಂಡಿಕ್ಕಿ ಕೊಂದ ತಂದೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಜೊತೆಗೆ ದಂಡವನ್ನೂ ಸಹ ವಿಧಿಸಿದೆ.

ಬೆಳಗಾವಿ, (ನ.11): ರಜೆಗೆ ಬಂದಿದ್ದ ಯೋಧನನ್ನು ಕೊಂದಿದ್ದ ಪಾಪಿ ತಂದೆಗೆ ಬೆಳಗಾವಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಬೈಲಹೊಂಗಲ ತಾಲ್ಲೂಕಿನ ನಯಾನಗರದ ವಿಠ್ಠಲ ಇಂಡಿ ಶಿಕ್ಷೆಗೆ ಗುರಿಯಾದವರು.  ಕೋರ್ಟ್ ಇಂದು ಜೀವಾವಧಿ ಶಿಕ್ಷೆಯ ಜೊತೆಗೆ ಮೂರು ಸಾವಿರ ರೂ. ದಂಡ ವಿಧಿಸಿದೆ. 2016ರ ಡಿಸೆಂಬರ್ 12ರಂದು ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದಲ್ಲಿ ಮಗ ಈರಣ್ಣ ಹತ್ಯೆಗೈದಿದ್ದ ತಂದೆ ವಿಠ್ಠಲ್ ಇಂಡಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಮದ್ವೆಗೆ ಸಿಗ್ಲಿಲ್ಲ ಮನ್ನಣೆ, ಸಾವಿನಲ್ಲಿ ಒಂದಾದ ಪ್ರೇಮಿಗಳು..! 

ಹಣಕಾಸಿನ ವ್ಯವಹಾರ ಸಂಬಂಧ ತಂದೆ ಮಗನ ಮಧ್ಯೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ವಿಠ್ಠಲ್ ರಿವಾಲ್ವರ್ ನಿಂದ ಗುಂಡು ಹಾರಿಸಿ ಮಗನನ್ನು ಕೊಂದಿದ್ದ. ವಿಠ್ಠಲ್ ಸಹ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಪ್ರಕರಣದ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

click me!