15 ವರ್ಷದ ಬಾಲೆಯೊಂದಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷನ ವಿವಾಹ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ಅಮಾನವೀಯ ಘಟನೆ

Published : Aug 31, 2025, 08:21 AM IST
Belagavi Gram Panchayat President Faces POCSO Case for Marrying 15 Year Old Girl

ಸಾರಾಂಶ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮಶಿ ಕಾಲಿಮಣಿ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ವಿವಾಹವಾದ ಆರೋಪದ ಮೇಲೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. 

ಬೆಳಗಾವಿ(ಆ.31): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ, ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮಶಿ ಕಾಲಿಮಣಿ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ವಿವಾಹವಾದ ಆರೋಪದ ಮೇಲೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

2023ರ ನವೆಂಬರ್ 5ರಂದು ಭೀಮಶಿ ಕಾಲಿಮಣಿ ಈ ಕೃತ್ಯವೆಸಗಿದ್ದು, ವಿವಾಹದ ವೇಳೆ ಬಾಲಕಿಯ ವಯಸ್ಸು ಕೇವಲ 15 ವರ್ಷವಾಗಿತ್ತು. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಯಮಕನಮರಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರು ಸ್ವೀಕರಿಸಿದ ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ. ಪರ್ವಿನ್ ನೇತೃತ್ವದ ರಕ್ಷಣಾ ತಂಡವು ಬಸ್ಸಾಪುರಕ್ಕೆ ನಾಲ್ಕು ಬಾರಿ ಭೇಟಿ ನೀಡಿತ್ತು. ಆದರೆ, ಬಾಲಕಿಯನ್ನು ಪತ್ತೆಹಚ್ಚಲು ತಂಡ ವಿಫಲವಾಗಿತ್ತು.ಈ ಮಧ್ಯೆ, ಭೀಮಶಿ ಕಾಲಿಮಣಿ ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಬಾಲಕಿಯ ನಕಲಿ ಜನನ ಪ್ರಮಾಣ ಪತ್ರವನ್ನು ಬಿಡುಗಡೆ ಮಾಡಿ, ಆಕೆ ಪ್ರಾಪ್ತ ವಯಸ್ಸಿನವಳೆಂದು ದಾಖಲೆ ಸೃಷ್ಟಿಸಿದ್ದ ಎನ್ನಲಾಗಿದೆ. ಆದರೆ ಅಧಿಕಾರಿಗಳು ಶಾಲಾ ಟ್ರಾನ್ಸಫರ್ ಸರ್ಟಿಫಿಕೇಟ್‌ನೊಂದಿಗೆ ಈ ದಾಖಲೆಯನ್ನು ಹೋಲಿಕೆ ಮಾಡಿದಾಗ, ಭೀಮಶಿ ಕಾಲಿಮಣಿ ಬಾಲ್ಯ ವಿವಾಹ ಮಾಡಿಕೊಂಡಿರುವುದು ದೃಢವಾಗಿದೆ.

ಕೃತ್ಯ ದೃಢಪಟ್ಟ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯು ಐದು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ವರದಿಯಾಗಿದೆ. ಈ ಘಟನೆಯು ಸ್ಥಳೀಯ ಆಡಳಿತದ ವೈಫಲ್ಯವನ್ನು ಎತ್ತಿ ತೋರಿಸಿದೆ. ಭೀಮಶಿ ಕಾಲಿಮಣಿ ಇದೀಗ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಹುಡುಕಾಟದಲ್ಲಿ ತೊಡಗಿದ್ದಾರೆ. ಈ ಘಟನೆಯು ಜಿಲ್ಲೆಯಲ್ಲಿ ಬಾಲ್ಯ ವಿವಾಹದಂತಹ ಸಾಮಾಜಿಕ ಕಳಂಕದ ವಿರುದ್ಧ ಕಠಿಣ ಕ್ರಮದ ಅಗತ್ಯವನ್ನು ತೋರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!