
ಬೆಳಗಾವಿ (ಸೆ.4): ಜಿಲ್ಲೆಯ ಗೋಕಾಕ್‌ಕ ಮಮದಾಪುರದಲ್ಲಿ ಬೆಳ್ಳಂಬೆಳಗ್ಗೆಯೇ ಬೀಕರ ಕೊಲೆ ನಡೆದಿದೆ. ದೇವಸ್ಥಾನದ ಕಟ್ಟೆ ಮೇಲೆ ಮಲಗಿದ್ದವನ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳು ಇನ್ನೂ ಬೀಕರವಾಗಿದೆ. ಮಮದಾಪುರ ಗ್ರಾಮದ 47 ವರ್ಷದ ಮಡ್ಡೆಪ್ಪ ಯಲ್ಲಪ್ಪ ಬಾನಸಿ ಮೃತ ವ್ಯಕ್ತಿ. ಬೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದ ಮಡ್ಡೆಪ್ಪ ಮಲಗಿದ್ದರು. ಈ ವೇಳೆ ದೇವಸ್ಥಾನಕ್ಕೆ ಆಗಮಿಸಿದ್ದ ಆರೋಪಿ ಬೀರಪ್ಪ ಮಾರಕಾಸ್ತ್ರದಲ್ಲಿ ಮಡ್ಡೆಪ್ಪನ ಮೇಲೆ ದಾರುಣವಾಗಿ ಹಲ್ಲೆ ಮಾಡಿದ್ದಾರೆ. ತೀವ್ರ ಹಲ್ಲೆಗೆ ಒಳಗಾಗಿದ್ದ ಮಡ್ಡೆಪ್ಪನನ್ನು ಈ ವೇಳೆಗೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.
ರಾಜಭವನ ಒತ್ತಡದಲ್ಲಿ ಕೆಲಸ ಮಾಡುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ
ಆಸ್ತಿ ಕಾರಣಕ್ಕೆ ಇಬ್ಬರ ಮಧ್ಯೆ ವ್ಯಾಜ್ಯ ಇದ್ದ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಮಡ್ಡೆಪ್ಪ ಸಾವು ಕಂಡಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೊಲೆಯ ಬಳಿಕ ಆರೋಪಿಯನ್ನು ಕಂಬಕ್ಕೆ ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಚಿಕ್ಕೋಡಿ: ಮರಕ್ಕೆ ನೇಣು ಬಿಗಿದುಕೊಂಡು 60 ವರ್ಷದ ವೃದ್ಧ ಆತ್ಮಹತ್ಯೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ