ಮೂರು ವರ್ಷಗಳ ಹಿಂದೆ ಗುಟ್ಕಾ ತಿಂದು ಮನೆ ಗೋಡೆಗೆ ಉಗುಳಿದ್ದಕ್ಕೆ ಬೆಳಗಾವಿಯಲ್ಲಿ ರಫೀಕ್ ಮುಲ್ಲಾ ಹತ್ಯೆ!

By Gowthami K  |  First Published Jul 16, 2023, 1:48 PM IST

ಬೆಳಗಾವಿ ನಗರವನ್ನು ಬೆಚ್ಚಿಬಿಳಿಸಿದ್ದ ಪೀರನವಾಡಿಯ ಯುವಕ ಅರ್ಬಾಜ್ ರಫೀಕ್ ಮುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಹತ್ಯೆ ಹಿಂದಿನ ಕಾರಣ ತಿಳಿದು ಹೌಹಾರಿದ್ದಾರೆ.


ಬೆಳಗಾವಿ (ಜು.16): ಬೆಳಗಾವಿ ನಗರವನ್ನು ಬೆಚ್ಚಿಬಿಳಿಸಿದ್ದ ಪೀರನವಾಡಿಯ ಯುವಕ ಅರ್ಬಾಜ್ ರಫೀಕ್ ಮುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಹತ್ಯೆ ಹಿಂದಿನ ಕಾರಣ ತಿಳಿದು ಹೌಹಾರಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಗುಟ್ಕಾ ತಿಂದು ಮನೆ ಗೋಡೆಗೆ ಉಗುಳಿರುವುದನ್ನು ಪ್ರಶ್ನಿಸಿದ್ದಕ್ಕೆ ಹತ್ಯೆಗೈದಿರುವ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದ ಪ್ರಸಾದ ನಾಗೇಶ ವಡ್ಡರ, ಪ್ರಕಾಶ ಕರ್ಲೇಕರ ಬಂಧಿತ ಆರೋಪಿಗಳು. ಇನ್ನು ಕೊಲೆಗೆ ಮನೆಯ ಗೋಡೆಗೆ ಗುಟ್ಕಾ ತಿಂದು ಉಗಳಿರುವುದರಿಂದ ನಡೆದ ಜಗಳದ ಹಳೆ ದ್ವೇಷವೇ ಕಾರಣ ಎಂದು ತನಿಖೆಯಿಂದ ತಿಳಿದು ಬಂದಿದೆ.

ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ರೌಡಿಶೀಟರ್ ಕೊಲೆ, 5 ಆರೋಪಿಗಳು ಅರೆಸ್ಟ್, ಹತ್ಯೆಯ ಮಾಸ್ಟರ್‌

Latest Videos

undefined

ನಿರ್ಜನ ಪ್ರದೇಶದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜು.14ರ ಶುಕ್ರವಾರ ನಡೆದಿತ್ತು. ಈ ಘಟನೆಯಿಂದ ಸುತ್ತಮುತ್ತಲಿನ ಜನರು ಬೆಚ್ಚಿ ಬಿದ್ದಿದ್ದರು. ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದ ನಿವಾಸಿ ಅರ್ಬಾಜ್‌ ರಫೀಕ್‌ ಮುಲ್ಲಾ (26) ಕೊಲೆಯಾದ ದುರ್ದೈವಿಯಾಗಿದ್ದು,  ಇಲ್ಲಿನ ಜೈನ್‌ ಇಂಜಿನಿಯರಿಂಗ್‌ ಕಾಲೇಜಿನ ಹಿಂಭಾಗದಲ್ಲಿರುವ ನಿರ್ಜನ ಪ್ರದೇಶದಲ್ಲಿ ಯುವಕನ ಶವ ಪತ್ತೆಯಾಗಿತ್ತು. ಈ ಘಟನೆ ಇಡೀ ಬೆಳಗಾವಿ ನಗರವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು.

ದೆಹಲಿ ರಿಜಿಸ್ಟರ್‌ ಕಾರಿನಿಂದ ಬೆಂಗಳೂರಲ್ಲಿ ವ್ಯಕ್ತಿಯ ಅಪಹರಣ, ಮೊಬೈಲ್‌ನಲ್ಲಿ ಸೆರೆ!

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಅರೆಸ್ಟ್‌, ರಾತ್ರಿಯೇ ಬಿಡುಗಡೆ
ಕಲಬುರಗಿ: ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ಚಿತ್ತಾಪುರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್‌ ಅವರನ್ನು ಪೊಲೀಸರು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿ ಚಿತ್ತಾಪುರ ಪೊಲೀಸರು ಅವರನ್ನು ಶುಕ್ರವಾರ ಬಂಧಿಸಿದ್ದರು. ರಾತ್ರಿಯೇ ಜಾಮೀನಿನ ಮೇಲೆ ಅವರು ಹೊರಬಂದಿದ್ದಾರೆ.

ಇದೇ ವೇಳೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಅವರು, ‘ಖರ್ಗೆಯವರ ಕುಟುಂಬವನ್ನು ಸಾಫ್‌ ಮಾಡುತ್ತೇನೆ’ ಎಂದಿದ್ದರು ಎನ್ನಲಾದ ಆಡಿಯೋ ಚುನಾವಣೆ ಸಂದರ್ಭದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು.

ಇದೀಗ, ಚಿತ್ತಾಪುರ ಪೊಲೀಸರು ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಮಣಿಕಂಠ ರಾಠೋಡ್‌ ಅವರು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಆದಾಗ್ಯೂ, ಅವರಿಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಠೋಡ್‌, ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕ್‌ ಖರ್ಗೆ ವಿರುದ್ಧ ಸೋತಿದ್ದರು.

click me!