ಬೆಳಗಾವಿ ಪೊಲೀಸರ ಮಹಾಬೇಟೆ: ದಾಖಲೆ ರಹಿತ ಎರಡು ಕೋಟಿ ನಗದು ಜಪ್ತಿ

By Govindaraj S  |  First Published Apr 5, 2023, 7:21 AM IST

ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್‌ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದನ್ನು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಗೇಟ್‌ನಲ್ಲಿ ವಶಪಡಿಸಿಕೊಳ್ಳಲಾಗಿದೆ. 


ಬೆಳಗಾವಿ (ಏ.05): ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್‌ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದನ್ನು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಗೇಟ್‌ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ (KA 70 1459) ಅನ್ನು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ‌ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿದೆ. 

ಕೆ.ಪಿ.ಆ್ಯಕ್ಟ್ ಪ್ರಕಾರ ಪ್ರಕರಣ ದಾಖಲಿಸಿಕೊಂಡು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ‌ ಮಾಹಿತಿಯನ್ನು ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಸುದ್ದಿ ತಿಳಿದ ತಕ್ಷಣವೇ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಅವರು ಭೇಟಿ ಪ್ರಕರಣವನ್ನು ಪರಿಶೀಲಿಸಿದರು. ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿರುತ್ತದೆ. 

Tap to resize

Latest Videos

ಆಟೋ ಮೇಲೆ ಪಕ್ಷಗಳ ಸ್ಟಿಕ್ಕರ್‌, ಬ್ಯಾನರ್‌ ಇದ್ದರೆ ಕೇಸ್‌: ಈವರೆಗೂ 450ಕ್ಕೂ ಹೆಚ್ಚು ಪ್ರಕರಣ ದಾಖಲು

ಡಿಸಿಪಿ ಸ್ನೇಹಾ, ಗ್ರಾಮೀಣ ಎಸಿಪಿ ಗೋಪಾಲಕೃಷ್ಣ ಗೌಡರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಚುನಾವಣಾಧಿಕಾರಿ ರಾಜಶೇಖರ್ ಡಂಬಳ, ಸಿಪಿಐ ಅಮರೇಶ್, ಎಫ್.ಎಸ್.ಟಿ. ತಂಡದ ಶಂಭುಲಿಂಗಪ್ಪ, ರಾಜೇಂದ್ರ ಮೊರಬದ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಪೊಲೀಸ್ ಹಾಗೂ ಎಫ್.ಎಸ್.ಟಿ. ತಂಡದ ಕಾರ್ಯವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಶ್ಲಾಘಿಸಿದ್ದಾರೆ.

click me!