ಬೆಳಗಾವಿ ಶಾಕ್: ಮಗ ಪ್ರೀತಿಸಿ ಓಡಿ ಹೋಗಿದ್ದಕ್ಕೆ ತಾಯಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಬೆತ್ತಲೆಗೊಳಿಸಿ ಹಲ್ಲೆ!

By Suvarna News  |  First Published Dec 11, 2023, 11:24 AM IST

ಇಡೀ ಸರ್ಕಾರವೇ ಬೆಳಗಾವಿ ಅಧಿವೇಶನಲ್ಲಿದ್ದಾಗ ಘನಘೋರ ದುರಂತವೊಂದು ನಡೆದಿದೆ. ಮಹಿಳೆಯನ್ನ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ  ಹಾಕಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ  ನಡೆದಿದೆ.


ಬೆಳಗಾವಿ (ಡಿ.11): ಇಡೀ ಸರ್ಕಾರವೇ ಬೆಳಗಾವಿ ಅಧಿವೇಶನಲ್ಲಿದ್ದಾಗ ಘನಘೋರ ದುರಂತವೊಂದು ನಡೆದಿದೆ. ಮಹಿಳೆಯನ್ನ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ  ಹಾಕಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ  ನಡೆದಿದೆ.

ಯುವಕನೊಬ್ಬ ಪ್ರೀತಿಸಿದ ಯುವತಿ ಜತೆಗೆ ಓಡಿ ಹೋಗಿದ್ದ. ಇದರಿಂದ ಆಕ್ರೋಶಗೊಂಡು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಟ್ಟಿ ಹಾಕಿ ಅವರ ಮೇಲೆ ಅಮಾನವೀಯ ವರ್ತನೆ ತೋರಲಾಗಿದೆ.

Latest Videos

undefined

ಮುದ್ದು ಮಾಡಲು ಬಳಿ ಬಂದ ನಾಯಿಮರಿಯನ್ನು ಹೊಡೆದು ಕೊಂದ ಪಾಪಿ!

ವಂಟಮೂರಿ ಗ್ರಾಮದ ನಿವಾಸಿ ದುಂಡಪ್ಪ ಅಶೋಕ ನಾಯಕ್ ಟ್ರಕ್‌ ಡೈವರ್‌ ಆಗಿದ್ದಾನೆ. ಈತನ ತಾಯಿ ಕಮಲವ್ವ ಅವರ  ಮೇಲೆ ಹಲ್ಲೆ ಮಾಡಲಾಗಿದೆ. ಕಮಲವ್ವ ಮಗ  ದುಂಡಪ್ಪ  ಪ್ರಿಯಾಂಕಾ ಬಸಪ್ಪ ನಾಯಕ್ ಎಂಬಾಕೆಯನ್ನು ಪ್ರೀತಿಸಿದ್ದ, ಕಳೆದ ಎರಡು ವರ್ಷದಿಂದ ಒಬ್ಬರಿಗೊಬ್ಬರು ಪ್ರಿತಿ ಮಾಡುತ್ತಿದ್ದರು. ಇಂದು ಪ್ರಿಯಾಂಕಾ  ಕುಟುಂಬಸ್ಥರು ಯಾದಿ ಮೇ ಶಾದಿ (ನಿಶ್ಚಿತಾರ್ಥ) ಮಾಡಲು ನಿರ್ಧರಿಸಿದ್ದರು.  

ಈ ವಿಚಾರ ತಿಳಿದ ಪ್ರೇಮಿಗಳು ಓಡಿ ಹೋಗಲು ನಿರ್ಧರಿಸಿದ್ದರು. ಮಧ್ಯರಾತ್ರಿ ಪ್ರಿಯಾಂಕಾ ಕರೆದುಕೊಂಡು  ದುಂಡಪ್ಪ ಓಡಿ ಹೋಗಿದ್ದಾನೆ. ಇದರಿಂದ ಆಕ್ರೋಶಗೊಂಡ ಯುವತಿ ಮನೆಯವರು ದುಂಡಪ್ಪನ ಮನೆಗೆ ಬಂದು, ಮನೆಯ ಬಾಗಿಲು ಒಡೆದು ಒಳ ಪ್ರವೇಶಿಸಿ ತಾಯಿಯ ಮೇಲೆ ಮೃಗೀಯ ವರ್ತನೆ ತೋರಿರುವುದು ಮಾತ್ರವಲ್ಲ ಮನೆಯಲ್ಲಿದ್ದ ವಸ್ತುಗಳನ್ನು ಹಾಳು ಮಾಡಿ ಹೋಗಿದ್ದಾರೆ.

ಟಿಬೆಟ್‌ ಹೆಸರೇ ಬದಲಿಸಿ ‘ಕ್ಸಿ ಜಾಂಗ್‌’ ಮಾಡಿದ ಚೀನಾ ಸರ್ಕಾರ!

ರಾತ್ರೋ ರಾತ್ರಿ  ಬೀಗ ಮುರಿದು ಯುವಕನ ಮನೆಗೆ ನುಗ್ಗಿ ಕಲ್ಲು ತೂರಿ ಇಡೀ ಮನೆ ಧ್ವಂಸ ಮಾಡಿರುವ ಕ್ರೂರಿಗಳು  ಬಳಿಕ ಮಲಗಿದ್ದ ಯುವಕನ ತಾಯಿ ಕಮಲವ್ವ ಬಟ್ಟೆ ಬಿಚ್ಚಿ ಹಲ್ಲೆ ಮಾಡಿ, ಬಳಿಕ ಮೆರವಣಿಗೆ ನಡೆಸಿ ಕಂಬಕ್ಕೆ ಕಟ್ಟಿ ಹಾಕಿ ಮತ್ತೆ ಹಲ್ಲೆ ಮಾಡಿದ್ದಾರೆ. ಮಹಿಳೆಯರು ಸೇರಿ ಒಟ್ಟು ಒಂಬತ್ತು ಮಂದಿ ತಾಯಿಯ ಮೇಲೆ ಹಲ್ಲೆ ಮಾಡಿದ್ದು, ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 ಸದ್ಯ ಪ್ರಕರಣ ಸಂಬಂಧ ಮಹಿಳೆಯರು ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಸಿದ್ದರಾಮಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವವರಿಗೆ ಪೊಲೀಸರು ಬಲೆ ಬೀಸಿದ್ದಾರೆ. ಮಹಿಳೆ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಡಿ ಗ್ರಾಮದಲ್ಲಿ ಪೋಲಿಸ್ ಬಂದೋಬಸ್ತ್‌ ಮಾಡಲಾಗಿದೆ.

ಆಸ್ಪತ್ರೆಗೆ ಗೃಹಸಚಿವ ಭೇಟಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲವ್ವ ಅವರನ್ನು ದಾಖಲು ಮಾಡಲಾಗಿರುವ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಗೃಹಸಚಿವ ಡಾ. ಜಿ. ಪರಮೇಶ್ವರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಹಲ್ಲೆಗೊಳಗಾದ ಸಂತ್ರಸ್ತೆಯಿಂದ ಘಟನೆಯ ಕುರಿತು ಮಾಹಿತಿ ಪಡೆದರು. ಗೃಹಸಚಿವರಿಗೆ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸಾಥ್ ನೀಡಿದರು.

click me!