
ಆನೇಕಲ್[ಜ.01]: ಟಿಪ್ಪರ್ ಲಾರಿ ಮತ್ತು ಪೇಪರ್ ಬಂಡಲ್ ಸಾಗಿಸುತ್ತಿದ್ದ ಟಾಟಾ ಏಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದಿನ ಪತ್ರಿಕೆಯ ವಿತರಕರೊಬ್ಬರು ಮೃತಪಟ್ಟಘಟನೆ ಮಂಗಳವಾರ ನಡೆದಿದೆ.
ದಿನಪತ್ರಿಕೆಯ ವಿತರಕರಾದ ಕೃಷ್ಣ (26) ಮೃತಪಟ್ಟವ್ಯಕ್ತಿಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ಟಾಟಾ ಏಸ್‌ನಲ್ಲಿ ಪತ್ರಿಕೆಗಳನ್ನು ಸಾಗಿಸಲಾಗುತ್ತಿತ್ತು. ತಾಲೂಕಿನ ಕೊಪ್ಪಗೇಟ್ ಬಳಿ ಅಪಘಾತ ಸಂಭವಿಸಿದೆ. ಟಾಟಾ ಏಸ್‌ನಲ್ಲಿದ್ದ ಕೃಷ್ಣ ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಅಪಘಾತದ ರಭಸಕ್ಕೆ ಟಾಟಾ ಏಸ್ ನುಜ್ಜುಗುಜ್ಜಾಗಿದೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಆನೇಕಲ್ ತಾಲೂಕು ಪತ್ರಿಕಾ ವಿತರಕರ ಸಂಘದ ಪದಾಧಿಕಾರಿಗಳಾದ ರಾಕೇಶ್, ನವೀನ್, ಸಾಗರ್, ಪತ್ರಕರ್ತರ ಸಂಘದ ಅಧ್ಯಕ್ಷ ಅಂಬರೀಶ್ ಶಾಸ್ತ್ರಿ ಹಾಗೂ ಶಿವಣ್ಣ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ